ಉಡುಪಿ:ಶ್ರೀ ಮಧ್ವವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ಐ ಎಸ್ ಟಿ ಇ ವಿದ್ಯಾರ್ಥಿ ಘಟಕವು ದಿನಾಂಕ 17 ಸೆಪ್ಟೆಂಬರ್ 2024 ರಂದು ದೇಶದ ಮಹಾನ್ ವ್ಯಕ್ತಿಗಳಲ್ಲಿ ಒಬ್ಬರಾದ ಸರ್ ಎಮ್ ವಿಶ್ವೇಶ್ವರಯ್ಯನವರ 165ನೇ ಜನ್ಮ ದಿನದ ಅಂಗವಾಗಿ
ಇಂಜಿನಿಯರ್ ದಿನಾಚರಣೆಯನ್ನು ಆಚರಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಎ ಜಿ
ಅಸೋಸಿಯೇಟ್ಸ್ ನ ಇಂಜಿನಿಯರ್ ಶ್ರೀ ಯೋಗೀಶ್ ಚಂದ್ರ ಧಾರಾ ಇವರು ಭಾಗವಹಿಸಿದ್ದರು. ಇವರು ಮಾತನಾಡಿ ಸರ್ ಎಮ್ ವಿಶ್ವೇಶ್ವರಯ್ಯನವರು ನಮ್ಮ ದೇಶಕ್ಕೆ ನೀಡಿದ ಕೊಡುಗೆಯ ಬಗ್ಗೆ ಸ್ಮರಿಸಿದರು ಹಾಗೂ ವಿಶ್ವೇಶ್ವರಯ್ಯನವರು ತಮ್ಮ ಜೀವನದಲ್ಲಿ
ಅನುಸರಿಸುತ್ತಿದ್ದ ಶಿಸ್ತು, ಸಂಯಮ, ಪ್ರಾಮಾಣಿಕತೆ
ಮತ್ತು ಸಮಯ ನಿರ್ವಹಣೆಯ ಬಗ್ಗೆ ಮಾಹಿತಿ ನೀಡಿದರು.

ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಇಂತಹ ಮೌಲ್ಯಗಳನ್ನು ಅನುಸರಿಸಬೇಕೆಂದು ತಿಳಿಸಿದರು.
ಸಂಸ್ಥೆಯ ಉಪ ಪ್ರಾಂಶುಪಾಲರಾದ ಡಾ. ಗಣೇಶ್ ಐತಾಳ್ ಈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ ವಿದ್ಯಾರ್ಥಿಗಳಿಗೆ ಇಂಜಿನಿಯರಿಂಗ್ ದಿನದ ಮಹತ್ವದ ಬಗ್ಗೆ ತಿಳಿಸಿದರು.
ವಿದ್ಯಾರ್ಥಿನಿಯಾದ ಚಿತ್ಕಲಾ ಇವರು ಪ್ರಾರ್ಥಿಸಿದರು. ವಿದ್ಯುನ್ಮಾನ ಮತ್ತು ಸಂವಹನ ವಿಭಾಗದ ಪ್ರಾಧ್ಯಾಪಕಿಯಾದ ಅಕ್ಷತಾರಾವ್ ಕಾರ್ಯಕ್ರಮವನ್ನು ನಿರೂಪಿಸಿದರು.ಈ ಸಮಾರಂಭದಲ್ಲಿ ಡೀನ್ಗಳು, ವಿವಿಧ ವಿಭಾಗದ ಮುಖ್ಯಸ್ಥರು, ಪ್ರಾಧ್ಯಾಪಕರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.












