ಉಡುಪಿ: ಪ್ರವಾಸೋದ್ಯಮ ಇಲಾಖೆಯಿಂದ 2019-20ನೇ ಸಾಲಿನಲ್ಲಿ ಉಡುಪಿ ಜಿಲ್ಲೆಯ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ಮತ್ತು ಅಲ್ಪಸಂಖ್ಯಾತ ವರ್ಗದವರಿಗೆ ಲಘುವಾಹನ ಚಾಲನಾ ಪರವಾನಗಿ ಹಾಗೂ ಚಾಲಕರ ಬ್ಯಾಡ್ಜ್ ಹೊಂದಿರುವ 20 ರಿಂದ 40 ವರ್ಷ ವಯೋಮಿತಿಯೊಳಗಿರುವ ಅಭ್ಯರ್ಥಿಗಳಿಂದ ಎಸ್.ಎಸ್.ಎಲ್.ಸಿ. ಪಾಸ್ ಆಗಿರುವ ನಿರುದ್ಯೋಗಿ ವಿದ್ಯಾವಂತ ಯುವಕ/ಯುವತಿಯರಿಗೆ ಪ್ರವಾಸೋದ್ಯಮ ಕ್ಷೇತ್ರದಲ್ಲಿ ಸ್ವಯಂ ಉದ್ಯೋಗ ಕೈಗೊಳ್ಳಲು ಪ್ರವಾಸಿ ವಾಹನಗಳನ್ನು ಖರೀದಿಸುವ ಸಲುವಾಗಿ ಅರ್ಹ ನಿರುದ್ಯೋಗಿ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಪ್ರವಾಸಿ ಟ್ಯಾಕ್ಸಿಗಳಿಗೆ ತಗಲುವ ಒಟ್ಟು ವೆಚ್ಚಕ್ಕೆ ಗರಿಷ್ಠ 3. ಲಕ್ಷ ರೂ.ಗಳನ್ನು ಇಲಾಖೆಯಿಂದ ಸಹಾಯಧನ ನೀಡಲಾಗುವುದು. ಟ್ಯಾಕ್ಸಿಯ ಒಟ್ಟು ಮೊತ್ತದ ಮೇಲೆ ಶೇ.5ರಷ್ಟು ಅಭ್ಯರ್ಥಿಯು ಭರಿಸುವುದು. ವಾಹನದ ಉಳಿದ ಮೊತ್ತವನ್ನು ರಾಷ್ಟ್ರೀಕೃತ ವಾಣಿಜ್ಯ ಬ್ಯಾಂಕ್/ ಸಹಕಾರಿ ಬ್ಯಾಂಕ್ ಮೂಲಕ ಸಾಲ ಸೌಲಭ್ಯ ಒದಗಿಸಿ ಖರೀದಿಸಿ ವಿತರಿಸಲಾಗುವುದು.
ಅರ್ಜಿಗಳನ್ನು ಖುದ್ದಾಗಿ ಸಹಾಯಕ ನಿರ್ದೇಶಕರು, ಪ್ರವಾಸೋದ್ಯಮ ಇಲಾಖೆ, 2ನೇ ಮಹಡಿ, ‘ಎ’ ಬ್ಲಾಕ್, ರಜತಾದ್ರಿ, ಮಣಿಪಾಲ ಕಛೇರಿ ಇವರಿಂದ ಪಡೆದು ಹಾಗೂ ಪಡೆದ ಅರ್ಜಿಯನ್ನು ದ್ವಿ-ಪ್ರತಿಯಲ್ಲಿ ಭರ್ತಿಮಾಡಿ ಸೀಲು ಮಾಡಿ ಲಕೋಟೆಯೊಂದಿಗೆ ಸೆಪ್ಟಂಬರ್ 19 ರ ಒಳಗೆ ಹಿಂತಿರುಗಿಸಬೇಕು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 0820-2574868 ಅನ್ನು ಸಂಪರ್ಕಿಸುವಂತೆ ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕರ ಪ್ರಕಟಣೆ ತಿಳಿಸಿದೆ.