Ratan Tata: ಸಾಕು ನಾಯಿಗೋಸ್ಕರ ಬ್ರಿಟನ್ ರಾಜಮನೆತನದ ಪ್ರತಿಷ್ಠಿತ ಪ್ರಶಸ್ತಿ ತಿರಸ್ಕರಿಸಿದ್ದ ರತನ್ ಟಾಟಾ

ದೇಶದ ಪ್ರತಿಷ್ಠಿತ ಕೈಗಾರಿಕೋದ್ಯಮಿ ರತನ್ ಟಾಟಾ(Ratan Tata) ಮುಂಬೈನಲ್ಲಿ ಕೊನೆಯುಸಿರೆಳೆದಿದ್ದಾರೆ. ಅವರು ಉದ್ಯಮದ ಜತೆಗೆ ಪ್ರಾಣಿ ಪ್ರಿಯರು ಹೌದು. ಬ್ರಿಟನ್​ನ ರಾಜಮನೆತನ ನೀಡುವ ಪ್ರತಿಷ್ಠಿತ ಪ್ರಶಸ್ತಿಯನ್ನು ಅಂದು ತಮ್ಮ ಸಾಕು ನಾಯಿಗೋಸ್ಕರ ತಿರಸ್ಕರಿಸಿದ್ದರು. ಆ ಕುರಿತ ಕುತೂಹಲಕಾರಿ ಮಾಹಿತಿ ಇಲ್ಲಿದೆ.

ದೇಶದ ಪ್ರತಿಷ್ಠಿತ ಕೈಗಾರಿಕೋದ್ಯಮಿ ರತನ್ ಟಾಟಾ(Ratan Tata) ಮುಂಬೈನಲ್ಲಿ ಕೊನೆಯುಸಿರೆಳೆದಿದ್ದಾರೆ. ಅವರು ಉದ್ಯಮದ ಜತೆಗೆ ಪ್ರಾಣಿ ಪ್ರಿಯರು ಹೌದು. ಬ್ರಿಟನ್​ನ ರಾಜಮನೆತನ ನೀಡುವ ಪ್ರತಿಷ್ಠಿತ ಪ್ರಶಸ್ತಿಯನ್ನು ಅಂದು ತಮ್ಮ ಸಾಕು ನಾಯಿಗೋಸ್ಕರ ತಿರಸ್ಕರಿಸಿದ್ದರು. ಆ ಕುರಿತ ಕುತೂಹಲಕಾರಿ ಮಾಹಿತಿ ಇಲ್ಲಿದೆ.

2018ರ ಫೆಬ್ರವರಿ 6ರಂದು ಬ್ರಿಟನ್​ನ ರಾಜಮನೆತನ ಬಕಿಂಗ್​ಹ್ಯಾಮ್ ಅರಮನೆಯಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು, ಸಮಾರಂಭದಲ್ಲಿ ಬ್ರಿಟನ್ ರಾಯಲ್ ಪ್ರಿನ್ಸ್​​ ಚಾರ್ಲ್ಸ್​ ಅವರು ಭಾರತೀಯ ಕೈಗಾರಿಕೋದ್ಯಮಿ ರತನ್ ಟಾಟಾ ಅವರಿಗೆ ಲೋಕೋಪಕಾರಿ ಕೆಲಸಕ್ಕೆ ಜೀವಮಾನದ ಸಾಧನೆ ಪ್ರಶಸ್ತಿ ನೀಡಲು ಬಯಸಿದ್ದರು.

ರತನ್ ಟಾಟಾ ಆ ಕಾರ್ಯಕ್ರಮಕ್ಕೆ ಹಾಜರಾಗಲು ಸಾಧ್ಯವಾಗಲಿಲ್ಲ, ಆದರೆ ಅದಕ್ಕೆ ಕಾರಣ ಅವರ ಸಾಕು ನಾಯಿ ಎಂದು ಹೇಳಿದರೆ ನಿಮಗೆಲ್ಲಾ ಆಶ್ಚರ್ಯವಾಗಬಹುದು. ಅಂಕಣಕಾರ ಸುಹೇಲ್ ಸೇಠ ಈ ಘಟನೆಯನ್ನು ಕೆಲವು ಸಮಯಗಳ ಹಿಂದೆ ಯೂಟ್ಯೂಬ್ ವಿಡಿಯೋದಲ್ಲಿ ನೆನಪಿಸಿಕೊಂಡಿದ್ದರು , ಇಷ್ಟು ದೊಡ್ಡ ಕಾರ್ಯಕ್ರಮಕ್ಕೆ ರತನ್ ಟಾಟಾ ಏಕೆ ಹೋಗಿರಲಿಲ್ಲ ಎನ್ನುವ ಮಾಹಿತಿಯನ್ನು ಹಂಚಿಕೊಂಡಿದ್ದರು.

ಟಿಷ್ ಏಷ್ಯನ್ ಟ್ರಸ್ಟ್ ಸಹಯೋಗದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಆಯೋಜಿಸಲಾಗಿತ್ತು ಎಂದು ಅವರು ಹೇಳಿದರು. ಕಾರ್ಯಕ್ರಮಕ್ಕೆ ಹಾಜರಾಗಲು ತಾನು ಫೆಬ್ರವರಿ 2 ಅಥವಾ ಫೆಬ್ರವರಿ 3 ರಂದು ಲಂಡನ್ ತಲುಪಿದ್ದೆ ಎಂದು ಸುಹೇಲ್ ಹೇಳಿದರು.

ಸುದೀರ್ಘ ವಿಮಾನ ಪ್ರಯಾಣದ ನಂತರ ಲಂಡನ್ ವಿಮಾನ ನಿಲ್ದಾಣಕ್ಕೆ ಬಂದಿಳಿದಾಗ, ತಮ್ಮ ಫೋನ್‌ನಲ್ಲಿ ರತನ್​ ಟಾಟಾ ಅವರ 11 ಮಿಸ್ಡ್​ ಕಾಲ್ ಇದ್ದಿದ್ದು ನೋಡಿ ಆಶ್ಚರ್ಯವಾಯಿತು. ಅವರ ಒಂದು ಸಾಕು ನಾಯಿಗೆ ತೀವ್ರ ಅನಾರೋಗ್ಯ ಕಾಡಿತ್ತು, ಅದಕ್ಕೆ ಕಾಯಿಲೆ ಇದೆ ಅದನ್ನು ಬಿಟ್ಟುಬರಲು ಸಾಧ್ಯವಿಲ್ಲ ಎಂದು ರತನ್ ಹೇಳಿದ್ದರು.

ಅವರ ಮನವೊಲಿಸಲು ಎಷ್ಟೇ ಪ್ರಯತ್ನಿಸಿದರೂ ಪ್ರಯೋಜನವಾಗಲಿಲ್ಲ, ಆ ಕಾರ್ಯಕ್ರಮಕ್ಕೆ ಪ್ರಶಸ್ತಿ ಸ್ವೀಕರಿಸಲು ಅವರು ಬಂದಿರಲಿಲ್ಲ.

ಕಾರ್ಯಕ್ರಮಕ್ಕೆ ರತನ್ ಟಾಟಾ ಬಾರದಿರುವುದರ ಹಿಂದಿನ ಕಾರಣ ಕೇಳಿ ಪ್ರಿನ್ಸ್ ಚಾರ್ಲ್ಸ್ ಹೇಳಿದ್ದನ್ನ ಸುಹೇಲ್ ಸೇಠ್ ನೆನಪಿಸಿಕೊಂಡಿದ್ದಾರೆ, ರಾಜಕುಮಾರ ಚಾರ್ಲ್ಸ್ ಅವರು, ಮನುಷ್ಯನೆಂದರೆ ಹೀಗಿರಬೇಕು, ರತನ್ ಟಾಟಾ ಅದ್ಭುತ ವ್ಯಕ್ತಿ ಎಂದು ಹೇಳಿದ್ದರು.