ಉಡುಪಿ: ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ಪರ್ಯಾಯ ಶ್ರೀ ಪಲಿಮಾರು ಮಠದ ಆಶ್ರಯದಲ್ಲಿ ಶ್ರೀಮನ್ಮಧ್ವಸಿದ್ಧಾಂತಪ್ರಬೋಧಿನೀ ಸಭಾ ಉಡುಪಿ, ಪರಮ ಪೂಜ್ಯ ಅಷ್ಠಮಠಾಧೀಶರಿಂದ ಸ್ಥಾಪಿತವಾದ ಶ್ರೀಮನ್ಮಧ್ವಸಿದ್ಧಾಂತ ಪ್ರಬೋಧಿನೀ ಸಂಸ್ಕೃತಮಹಾಪಾಠಶಾಲೆಯ 115 ನೇಯ ವಾರ್ಷಿಕೋತ್ಸವದ ಪ್ರಯುಕ್ತ ಪ್ರೌಢ ಶಾಲಾ ವಿದ್ಯಾರ್ಥಿಗಳಿಂದ ‘ದಾನಶೂರ ಶಿಬಿ’ ಎಂಬ ಪ್ರಸಂಗದ ಯಕ್ಷಗಾನ ನಡೆಯಿತು.












