ಬೈಂದೂರು: ರಸ್ತೆಯ ಮಧ್ಯೆ ಡಿವೈಡರ್‌ಗೆ ಸ್ಕೂಟರ್ ಢಿಕ್ಕಿ: ಸಹಸವಾರ ಮೃತ್ಯು, ಸವಾರ ಗಂಭೀರ.

ಬೈಂದೂರು: ಬೈಂದೂರು ಮನಿಶ್ ಬಾರ್ ಎದುರು ಪ್ಲೈ ಓವರ್ ರಸ್ತೆಯಲ್ಲಿ ಸ್ಕೂಟರ್ ಹತೋಟಿ ತಪ್ಪಿ ಡಿವೈಡರ್‌ಗೆ ಢಿಕ್ಕಿ ಹೊಡೆದು ಸಹಸವಾರ ಮೃತಪಟ್ಟು ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಅ.14ರಂದು ನಸುಕಿನ ವೇಳೆ 1.40ರ ಸುಮಾರಿಗೆ ನಡೆದಿದೆ.

ಮೃತರನ್ನು ಅಬ್ದುಲ್ ಮುನೀರ್ ಎಂದು ಗುರುತಿಸಲಾಗಿದೆ. ಸವಾರ ಅಬ್ದುಲ್ ನಝೀರ್ ಎಂಬವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಉಪ್ಪುಂದ ಕಡೆಯಿಂದ ಶಿರೂರು ಕಡೆಗೆ ಹೋಗುತ್ತಿದ್ದ ಸ್ಕೂಟಿ ಸವಾರನ ಹತೋಟಿ ತಪ್ಪಿ ರಸ್ತೆಯ ಮಧ್ಯೆ ಇರುವ ಡಿವೈಡರ್ ಗೋಡೆಗೆ ಡಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರಿಂದ ಸವಾರರಿಬ್ಬರೂ ರಸ್ತೆಗೆ ಬಿದ್ದರೆನ್ನಲಾಗಿದೆ. ಇದರ ಪರಿಣಾಮ ಗಂಭೀರವಾಗಿ ಗಾಯಗೊಂಡ ಅಬ್ದುಲ್ ಮುನೀರ್ ಆಸ್ಪತ್ರೆಗೆ ಸಾಗಿಸುವಾಗ ದಾರಿ ಮಧ್ಯೆ ಮೃತಪಟ್ಟರು ಎಂದು ತಿಳಿದುಬಂದಿದೆ. ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.