ಉಡುಪಿ: ಆಟೋ ರಿಕ್ಷಾವೊಂದು ಡಿಕ್ಕಿ ಹೊಡೆದ ಪರಿಣಾಮ ಶಾಲಾ ವಿದ್ಯಾರ್ಥಿ ಗಂಭೀರವಾಗಿ ಗಾಯಗೊಂಡ ಘಟನೆ ಅದಮಾರು ಪೂರ್ಣಪ್ರಜ್ಞಾ ಆಂಗ್ಲ ಮಾಧ್ಯಮ ಶಾಲಾ ಆವರಣದಲ್ಲಿ ಸಂಭವಿಸಿದೆ.
ಗಾಯಗೊಂಡ ಬಾಲಕನನ್ನು ಎರ್ಮಾಳು ಬರ್ಪಾಣಿ ಸಂತೋಷ್ ಶೆಟ್ಟಿ ಅವರ ಪುತ್ರ ಭವಿನ್ ಶೆಟ್ಟಿ ಎಂದು ಗುರುತಿಸಲಾಗಿದೆ.
ಈತ ಅದೇ ಶಾಲೆಯಲ್ಲಿ ಒಂದನೇ ತರಗತಿಯಲ್ಲಿ ವಿದ್ಯಾಭ್ಯಾಸ ನಡೆಸುತ್ತಿದ್ದಾನೆ. ಭವಿನ್ ಸಂಜೆ ಶಾಲೆ ಬಿಟ್ಟ ನಂತರ ಮನೆಗೆ ಹೋಗಲು ಶಾಲಾ ಆವರಣದಲ್ಲಿ ತಂದೆಗಾಗಿ ಕಾಯುತ್ತಿದ್ದನು. ಈ ವೇಳೆ ಶಾಲಾ ಆವರಣದೊಳಗೆ ಬಂದ ಆಟೊ ರಿಕ್ಷಾವೊಂದು ಬಾಲಕನಿಗೆ ಡಿಕ್ಕಿ ಹೊಡೆದಿದೆ. ಇದರ ಪರಿಣಾಮ ಬಾಲಕನ ಎರಡೂ ಕಾಲುಗಳಿಗೂ ಗಂಭೀರ ಗಾಯವಾಗಿದ್ದು, ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬಾಲಕನ ತಂದೆ ಸಂತೋಷ್ ಶೆಟ್ಟಿ ಬರ್ಪಾಣಿ ನೀಡಿದ ದೂರಿನಂತೆ ಪಡುಬಿದ್ರಿ ಠಾಣೆಯಲ್ಲಿ ಆಟೋ ಚಾಲಕ ಸದಾನಂದ ದೇವಾಡಿಗ ಹಾಗೂ ಆಡಳಿತ ಮಂಡಳಿಯ ವಿರುದ್ಧ ಪ್ರಕರಣ ದಾಖಲಾಗಿದೆ.