ಉಡುಪಿ:ಸಂತ್ರಸ್ತ ಮಕ್ಕಳಿಗೆ ಬೆಂಬಲ ವ್ಯಕ್ತಿಗಳಿಗಾಗಿ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ

ಉಡುಪಿ: ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ವತಿಯಿಂದ ಪೋಕ್ಸೋ ಕಾಯಿದೆಯಡಿ ಸಂತ್ರಸ್ತ ಮಕ್ಕಳಿಗೆ ಬೆಂಬಲ ವ್ಯಕ್ತಿಗಳಿಗಾಗಿ ಸೇವೆ ಸಲ್ಲಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಮಕ್ಕಳೊಂದಿಗೆ ಕೆಲಸ ಮಾಡುವ ಮೂಲಕ ಮಕ್ಕಳ ಶಿಕ್ಷಣ, ಅಭಿವೃದ್ಧಿ ಅಥವಾ ರಕ್ಷಣಾ ವಿಷಯದಲ್ಲಿ ಕನಿಷ್ಟ 3 ವರ್ಷಗಳ ಅನುಭವದೊಂದಿಗೆ ಪದವಿ ಅಥವಾ ಸಮಾಜ ಕಾರ್ಯ, ಸೋಷಿಯೋಲಾಜಿ, ಸೈಕೋಲಾಜಿ, ಚೈಲ್ಡ್ ಡೆವಲಪ್‌ಮೆಂಟ್ ವಿಷಯದಲ್ಲಿ
ಸ್ನಾತಕೋತ್ತರ ಪದವಿ ಹೊಂದಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ನವೆಂಬರ್ 8 ಕೊನೆಯ ದಿನ.

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳ ಕಚೇರಿ, ಬಿ ಬ್ಲಾಕ್, ಮೊದಲನೇ ಮಹಡಿ, ಜಿಲ್ಲಾಧಿಕಾರಗಳ ಸಂಕೀರ್ಣ, ರಜತಾದ್ರಿ, ಮಣಿಪಾಲ ಕಛೇರಿಯನ್ನು ಸಂಪರ್ಕಿಬಹುದಾಗಿದೆ ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.