ಉಡುಪಿ: ಯಕ್ಷಗಾನ ಗುರು ಬನ್ನಂಜೆ ಸಂಜೀವ ಸುವರ್ಣ ಅವರಿಗೆ ಪಾರ್ತಿಸುಬ್ಬ ಪ್ರಶಸ್ತಿ ಪ್ರದಾನ.

ಉಡುಪಿ: ‘ಗುರು ಸುವರ್ಣ’ ಎಂದೇ ಸುಪ್ರಸಿದ್ಧರಾಗಿರುವ ಉಡುಪಿಯ ಯಕ್ಷಗಾನ ಗುರು ಬನ್ನಂಜೆ ಸಂಜೀವ ಸುವರ್ಣ ಅವರಿಗೆ ಕರ್ನಾಟಕ ಯಕ್ಷಗಾನ ಅಕಾಡೆಮಿ ೨೦೨೩ನೇ ಸಾಲಿನ ಪ್ರತಿಷ್ಠಿತ ಪಾರ್ತಿಸುಬ್ಬ ಪ್ರಶಸ್ತಿ ನೀಡಿ ಗೌರವಿಸಿದೆ.

ನ.೧೯ರಂದು ಮಂಗಳೂರು ಉರ್ವಸ್ಟೋರಿನ ಅಂಬೇಡ್ಕರ್ ಭವನದಲ್ಲಿ ನಡೆದ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಅಕಾಡೆಮಿಯ ಅಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ ಅವರ ನೇತೃತ್ವದಲ್ಲಿ ನಡೆದ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಬನ್ನಂಜೆ ಸಂಜೀವ ಸುವರ್ಣ ಅವರಿಗೆ ಈ ಪ್ರತಿಷ್ಠಿತ ಪುರಸ್ಕಾರ ನೀಡಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಶಾಸಕರಾದ ಡಿ.ವೇದವ್ಯಾಸ ಕಾಮತ್, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ ಗಟ್ಟಿ ಕಾಪಿಕಾಡ್, ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ, ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ಮನೋಜ್ ಕುಮಾರ್, ಅಕಾಡೆಮಿಯ ರಿಜಿಸ್ಟ್ರಾರ್ ನಮೃತಾ ಎನ್. ಮೊದಲಾದವರು ಉಪಸ್ಥಿತರಿದ್ದರು.