ಉಡುಪಿ:ವಿಶೇಷ ಅಗತ್ಯತೆಯುಳ್ಳ ಮಕ್ಕಳಿಗೆ ವೈದ್ಯಕೀಯ ತಪಾಸಣಾ ಶಿಬಿರ

ಉಡುಪಿ: ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯಲ್ಲಿ ಸಮಗ್ರ ಶಿಕ್ಷಾ ಕರ್ನಾಟಕ ಯೋಜನೆಯಡಿ ಪೂರ್ವ ಪ್ರಾಥಮಿಕ
ತರಗತಿಯಿಂದ ಪದವಿ ಪೂರ್ವ ತರಗತಿವರೆಗಿನ ಶಾಲಾ ಶಿಕ್ಷಣ ಇಲಾಖೆಯ ವಿಶೇಷ ಅಗತ್ಯತೆಯುಳ್ಳ ಮಕ್ಕಳಿಗೆ ವೈದ್ಯಕೀಯ ತಪಾಸಣಾ ಶಿಬಿರವು ಕಾರ್ಕಳ ವಲಯಕ್ಕೆ ನವೆಂಬರ್ 23 ರಂದು ಕಾರ್ಕಳ ಬಿ.ಆರ್.ಸಿ ಯಲ್ಲಿ, ಬೈಂದೂರು ಮತ್ತು ಕುಂದಾಪುರ ವಲಯದವರಿಗೆ
ನವೆಂಬರ್ 25 ರಂದು ಕುಂದಾಪುರದ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಹಾಗೂ ಉಡುಪಿ ಮತ್ತು ಬ್ರಹ್ಮಾವರ ವಲಯದವರಿಗೆ ನವೆಂಬರ್ 26 ರಂದು ನಗರದ ಅಜ್ಜರಕಾಡು ಬಿ.ಆರ್.ಸಿಯಲ್ಲಿ ನಡೆಯಲಿದೆ.

ಮಕ್ಕಳ ಅಗತ್ಯ ದಾಖಲೆಗಳಾದ ಯು.ಡಿ.ಐ.ಡಿ ಕಾರ್ಡ್, ರೇಷನ್ ಕಾರ್ಡ್, ಆಧಾರ್ ಕಾರ್ಡ್, ಪಾಸ್‌ಪೋರ್ಟ್ ಅಳತೆಯ ಭಾವಚಿತ್ರ, ಆದಾಯ ಪ್ರಮಾಣ ಪತ್ರ ಹಾಗೂ ಬ್ಯಾಂಕ್ ಪಾಸ್ ಬುಕ್ ಜೆರಾಕ್ಸ್ ಪ್ರತಿಯೊಂದಿಗೆ ಶಿಬಿರದ ಪ್ರಯೋಜನವನ್ನು ಸಂಬಂಧಿಸಿದ ಪಾಲಕರು ಪಡೆದುಕೊಳ್ಳುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.