ಉಡುಪಿ:ಗ್ರಾಮ ಪಂಚಾಯತ್ ಉಪ ಚುನಾವಣೆ : ಮದ್ಯ ಮಾರಾಟ ನಿಷೇಧ

ಉಡುಪಿ: ಗ್ರಾಮ ಪಂಚಾಯತಿಗಳ ಸಾರ್ವತ್ರಿಕ / ಉಪ ಚುನಾವಣೆ ಡಿಸೆಂಬರ್ -2024 ಕ್ಕೆ ಸಂಬಂಧಿಸಿದಂತೆ ಜಿಲ್ಲೆಯ ಕುಂದಾಪುರ ತಾಲೂಕಿನ 45-ಗಂಗೊಳ್ಳಿ ಗ್ರಾಮ ಪಂಚಾಯತಿಯಲ್ಲಿ ಉಪ ಚುನಾವಣೆ ನಡೆಸುವ ಸಂಬಂಧ ಡಿಸೆಂಬರ್ 8 ರಂದು ಮತದಾನ ದಿನವನ್ನು ನಿಗಧಿಪಡಿಸಿ ರಾಜ್ಯ ಚುನಾವಣಾ ಆಯೋಗವು ಆದೇಶಿಸಿರುತ್ತದೆ.

ಚುನಾವಣಾ ಆಯೋಗದ ನಿರ್ದೇಶನದಂತೆ ಕರ್ನಾಟಕ ಅಬಕಾರಿ ಕಾಯ್ದೆ ಸಾಮಾನ್ಯ ನಿಯಮಾವಳಿ 1967 ಕಲಂ (10)ಬಿ ರ ಪ್ರಕಾರ ಹಾಗೂ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ 1993 ರ ಪ್ರಕರಣ 308 ಎಸಿ ರಂತೆ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಗಂಗೊಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಡಿಸೆಂಬರ್ 6 ರಂದು ಸಂಜೆ 5 ಗಂಟೆಯಿಂದ ಡಿಸೆಂಬರ್ 8 ರ ಸಂಜೆ 5 ರ ವರೆಗೆ ಎಲ್ಲಾ ರೀತಿಯ ಮದ್ಯದಂಗಡಿ, ಮದ್ಯ ಮಾರಾಟ ಡಿಪೋಗಳನ್ನು, ಮದ್ಯ ತಯಾರಿಕಾ ಡಿಸ್ಟಿಲರಿಗಳನ್ನು, ಸ್ಟಾರ್ ಹೋಟೆಲ್‌ಗಳನ್ನು, ಶೇಂದಿ ಅಂಗಡಿಗಳನ್ನು ಮುಚ್ಚಲು ಆದೇಶಿಸಿ, ಒಣದಿನ ಎಂದು ಘೋಷಿಸಿ, ಮದ್ಯ ಮಾರಾಟವನ್ನು ನಿಷೇಧಿಸಿ, ಜಿಲ್ಲಾ ದಂಡಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಆದೇಶಿಸಿರುತ್ತಾರೆ.