ಉಡುಪಿ: ಜಿಲ್ಲೆಯ ಕುಂದಾಪುರ ತಾಲೂಕಿನ ಸೌಪರ್ಣಿಕಾ ನದಿಗೆ ಅಡ್ಡಲಾಗಿ ಕುಂದಾಪುರ-ಬೈಂದೂರು ರಾಷ್ಟ್ರೀಯ ಹೆದ್ದಾರಿ-66 ರ ಮುಳ್ಳಿಕಟ್ಟೆ ಸಮೀಪದ ಅರಾಟೆಯಲ್ಲಿ 1966 ಇಸವಿಯಲ್ಲಿ ನಿರ್ಮಿಸಿರುವ ಹಳೆಯ ಸೇತುವೆಯು ಶಿಥಿಲಗೊಂಡಿರುವ ಹಿನ್ನೆಲೆ, ಸಾರ್ವಜನಿಕ ಹಿತ ದೃಷ್ಟಿಯಿಂದ ಕೇಂದ್ರ ಮೋಟಾರು ವಾಹನ ಕಾಯ್ದೆ 1988ರ ಕಲಂ 115 ಹಾಗೂ ಕರ್ನಾಟಕ ಮೋಟಾರು ವಾಹನಗಳ ನಿಯಮಾವಳಿಗಳು 1989ರ ಕಲಂ 221(ಎ(2) & (5) ಅನ್ವಯ, ಕುಂದಾಪುರ-ಬೈಂದೂರು ರಾಷ್ಟ್ರೀಯ ಹೆದ್ದಾರಿ-66 ರ ಮುಳ್ಳಿಕಟ್ಟೆ ಸಮೀಪದ ಅರಾಟೆ ಹಳೆ ಸೇತುವೆಯಲ್ಲಿ (ಏm 272-840) ವಾಹನ ಸಂಚಾರವನ್ನು ನಿಷೇಧಿಸಿ ಈ ಸೇತುವೆಯಲ್ಲಿ ಸಂಚರಿಸುವ ವಾಹನಗಳಿಗೆ ಪಕ್ಕದಲ್ಲೇ ಚತುಷ್ಪಥ ಹೆದ್ದಾರಿಯಲ್ಲಿ ನಿರ್ಮಾಣಗೊಂಡ ಹೊಸ ಸೇತುವೆಯಲ್ಲಿ ಬದಲೀ ಸಂಚಾರ ವ್ಯವಸ್ಥೆಯನ್ನು ಮಾಡಿ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾ ಕುಮಾರಿ ಆದೇಶಿಸಿರುತ್ತಾರೆ.