ಉಡುಪಿ:ಡ್ರೋನ್ ಆಧಾರಿತ ಫೋಟೋಗ್ರಾಫಿ, ವೀಡಿಯೋಗ್ರಾಫಿ ತರಬೇತಿ : ಅರ್ಜಿ ಆಹ್ವಾನ

ಉಡುಪಿ: ಡ್ರೋನ್ ಆಧಾರಿತ ಫೋಟೋಗ್ರಾಫಿ ಮತ್ತು ವೀಡಿಯೋಗ್ರಾಫಿ ತರಬೇತಿಗಾಗಿ (ಮೂಲನಿವಾಸಿ, ಅಲೆಮಾರಿ, ಅರೆಅಲೆಮಾರಿ & ಸೂಕ್ಷ್ಮ/ಅತಿ ಸೂಕ್ಷ್ಮ ಪರಿಶಿಷ್ಟ ಪಂಗಡದ ಸಮುದಾಯದವರಿಗೆ ಆದ್ಯತೆ) ಪರಿಶಿಷ್ಟ ಪಂಗಡದ ಯುವಕ ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಡಿಸೆಂಬರ್ 12 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಐ.ಟಿ.ಡಿ.ಪಿ ಕಚೇರಿ, ರಜತಾದ್ರಿ, ಮಣಿಪಾಲ ಉಡುಪಿ ದೂ.ಸಂಖ್ಯೆ: 0820-2574814 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.