ಡಿ.3: ವಿಶ್ವ ವಿಕಲಚೇತನರ ದಿನಾಚರಣೆ

ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಪೊಲೀಸ್ ಇಲಾಖೆ, ಆರೋಗ್ಯ ಇಲಾಖೆ, ವಿಕಲಚೇತನರ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಸ್ವಯಂ ಸೇವಾ ಸಂಸ್ಥೆಗಳು ಹಾಗೂ ವಿಕಲಚೇತನರ ಸಂಘಟನೆಗಳು ಮತ್ತು ಪಾಲಕರ ಸಂಘಟನೆ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ವಿಕಲಚೇತನರ ದಿನಾಚರಣೆ ಕಾರ್ಯಕ್ರಮವು ಡಿಸೆಂಬರ್ 3 ರಂದು ಬೆಳಗ್ಗೆ 10 ಗಂಟೆಗೆ ನಗರದ ಶ್ರೀಮತಿ ಅಮ್ಮಣ್ಣಿ ರಾಮಣ್ಣ ಶೆಟ್ಟಿ ಸಭಾಭವನ (ಮಿನಿಹಾಲ್) ದಲ್ಲಿ ನಡೆಯಲಿದೆ.

ಕಾರ್ಯಕ್ರಮವನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಆರ್. ಹೆಬ್ಬಾಳ್ಕರ್ ಉದ್ಘಾಟಿಸಲಿದ್ದು, ಶಾಸಕ ಯಶ್‌ಪಾಲ್ ಎ ಸುವರ್ಣ ಅಧ್ಯಕ್ಷತೆ ವಹಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ಸಂಸದರಾದ ಬಿ.ವೈ ರಾಘವೇಂದ್ರ ಹಾಗೂ ಕೋಟ ಶ್ರೀನಿವಾಸ ಪೂಜಾರಿ, ಶಾಸಕರುಗಳಾದ ವಿ ಸುನಿಲ್ ಕುಮಾರ್, ಗುರುರಾಜ್ ಶೆಟ್ಟಿ ಗಂಟಿಹೊಳೆ, ಎ ಕಿರಣ್ ಕುಮಾರ್ ಕೊಡ್ಗಿ ಹಾಗೂ ಗುರ್ಮೆ ಸುರೇಶ್ ಶೆಟ್ಟಿ, ವಿಧಾನಪರಿಷತ್ ಶಾಸಕರುಗಳಾದ ಎಸ್.ಎಲ್. ಭೋಜೇಗೌಡ, ಮಂಜುನಾಥ್ ಭಂಡಾರಿ, ಡಾ. ಧನಂಜಯ ಸರ್ಜಿ ಹಾಗೂ ಕಿಶೋರ್ ಕುಮಾರ್ ಪುತ್ತೂರು, ನಗರಸಭೆ ಅಧ್ಯಕ್ಷ ಪ್ರಭಾಕರ ಪೂಜಾರಿ, ನಗರಾಭಿವೃಧ್ದಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸತ್ಯವತಿ ಜಿ ಹಾಗೂ ಮತ್ತಿತರರು ಭಾಗವಹಿಸಲಿದ್ದಾರೆ.