ಪ್ರವಾಸಿಗರಿಗೂ ತಟ್ಟಿದ ಸೈಕ್ಲೋನ್ ಎಫೆಕ್ಟ್: ಮಲ್ಪೆ ಬೀಚ್ ವೀಕ್ಷಣೆಗೆ ಬಂದ ಪ್ರವಾಸಿಗರಿಗೆ ನಿರಾಸೆ

ಉಡುಪಿ: ಫೆಂಗಲ್ ಚಂಡಮಾರುತದ ಎಫೆಕ್ಟ್ ಉಡುಪಿ ಜಿಲ್ಲೆಗೆ ಬರುವ ಪ್ರವಾಸಿಗರಿಗೂ ತಟ್ಟಿದೆ. ಸೈಕ್ಲೋನ್ ನಿಂದ ಸಮುದ್ರದ ಅಲೆಗಳು ಅಬ್ಬರಿಸುತ್ತಿವೆ. ಹೀಗಾಗಿ ಮಲ್ಪೆ ಬೀಚ್ ಆಗಮಿಸಿದ ಪ್ರವಾಸಿಗರು ದೂರದಲ್ಲೇ ನಿಂತು ವೀಕ್ಷಣೆ ಮಾಡುತ್ತಿದ್ದಾರೆ.

Oplus_131072
Oplus_131072
Oplus_131072
Oplus_131072

ಸಮುದ್ರಕ್ಕೆ ಇಳಿಯದಂತೆ ಈಗಾಗಲೇ ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ. ಹೀಗಾಗಿ ಮಲ್ಪೆ ಬೀಚ್ ನಲ್ಲಿ ಸಮುದ್ರಕ್ಕೆ ಇಳಿಯದಂತೆ ಲೈಫ್ ಗಾರ್ಡ್ ಗಳು ಎಚ್ಚರಿಕೆ ನೀಡುತ್ತಿದ್ದಾರೆ‌. ಮಲ್ಪೆ ಬೀಚಿಗೆ ಬಂದವರನ್ನು ಬಂದ ದಾರಿಯಲ್ಲಿಯೇ ವಾಪಸ್ಸು ಕಳುಹಿಸಲಾಗುತ್ತುದೆ. ಮಲ್ಪೆ ಬೀಚ್ ವೀಕ್ಷಣೆಗೆ ಬಂದ ಪ್ರವಾಸಿಗರು ನಿರಾಸೆಯಿಂದ ವಾಪಸ್ಸು ಹೋಗುತ್ತಿದ್ದಾರೆ.