ಉಡುಪಿ: ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ಸಹಕಾರ ಕುಕ್ಕಟ ಮಹಾಮಂಡಳ ನಿಯಮಿತ ಬೆಂಗಳೂರು ಇವರ ವತಿಯಿಂದ, ಜಿಲ್ಲೆಯಲ್ಲಿರುವ ಪ.ಜಾತಿ, ಪ.ಪಂಗಡ ಹಾಗೂ ಸಾಮಾನ್ಯ ವರ್ಗದ ಅರ್ಹ ರೈತ ಮಹಿಳೆಯರಿಗೆ 5 ವಾರದ 20 ಹಿತ್ತಲ ಕೋಳಿಮರಿಗಳನ್ನು ವಿತರಿಸಿ, ಅವರ ಆದಾಯ ಹೆಚ್ಚಿಸುವ ಕಾರ್ಯಕ್ರಮ ಯೋಜನೆಗೆ ಅರ್ಜಿಯನ್ನು ಆಹ್ವಾನಿಸಲಾಗಿರುತ್ತದೆ.
ಆಸಕ್ತ ಅರ್ಹ ರೈತ ಮಹಿಳೆಯರು ಹೆಚ್ಚಿನ ಮಾಹಿತಿಗಾಗಿ ತಮ್ಮ ಹತ್ತಿರದ ಪಶುವೈದ್ಯ ಸಂಸ್ಥೆ ಅಥವಾ ತಾಲೂಕು ಪಶು ಆಸ್ಪತ್ರೆಯ ಮುಖ್ಯ ಪಶುವೈದ್ಯಾಧಿಕಾರಿಯವರನ್ನು ಸಂಪರ್ಕಿಸಬಹುದಾಗಿದೆ ಎಂದು ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯ ಉಪನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.