ಉಡುಪಿ: ಕುರಿ-ಮೇಕೆ ಘಟಕ ಅನುಷ್ಠಾನ; ಅರ್ಜಿ ಆಹ್ವಾನ

ಉಡುಪಿ, ಡಿ.05: ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ ನಿಯಮಿತ, ಉಡುಪಿ ವತಿಯಿಂದ ಗಿರಿಜನ ಉಪಯೋಜನೆಯಡಿ ಗ್ರಾಮೀಣ ಭಾಗದ ಪರಿಶಿಷ್ಠ ಪಂಗಡದ ರೈತರಿಗೆ ಶೇ.90 ರಷ್ಟು ಸಹಾಯಧನದೊಂದಿಗೆ 10+1 ಕುರಿ/ಮೇಕೆ ಘಟಕ ಪೂರೈಕೆ ಯೋಜನೆಯನ್ನು ಅನುಷ್ಟಾನಗೊಳಿಸಲು ಪರಿಶಿಷ್ಠ ಪಂಗಡದ 18 ರಿಂದ 60 ವರ್ಷ ವಯೋಮಿತಿಯ ಮಹಿಳಾ ಸದಸ್ಯರು, ಮಹಿಳಾ ಸದಸ್ಯರು ಲಭ್ಯವಿಲ್ಲದಿದ್ದಲ್ಲಿ ಪುರುಷ ಸದಸ್ಯರುಗಳನ್ನು ಹಾಗೂ ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘಗಳು ಇಲ್ಲದೇ ಇರುವ ಜಿಲ್ಲೆ /ತಾಲೂಕು ಗಳಲ್ಲಿಯೂ ಸಹ ಕುರಿ ಸಾಕಾಣಿಕೆದಾರರುಗಳನ್ನು ಫಲಾನುಭವಿಗಳನ್ನಾಗಿ ಆಯ್ಕೆ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಡಿಸೆಂಬರ್ 21 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ತಮ್ಮ ಗ್ರಾಮದ ವ್ಯಾಪ್ತಿಯಲ್ಲಿರುವ ಪಶು ಆಸ್ಪತ್ರೆ / ಪಶು ಚಿಕಿತ್ಸಾಲಯ ಅಥವಾ ಸಹಾಯಕ ನಿರ್ದೇಶಕರು, ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ ನಿಯಮಿತ, ಉಡುಪಿ ದೂರವಾಣಿ ಸಂಖ್ಯೆ: 9449157129 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯ ಉಪನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.