ನಾಳೆ (ಡಿ.7) ಪೆರ್ಡೂರು ಬಂಟರ ಸಭಾಭವನದಲ್ಲಿ ರಾಜ್ಯಮಟ್ಟದ ಸಂಗೀತ ಸ್ಪರ್ಧೆ.

ಹೆಬ್ರಿ: ಬಂಟರ ಸಂಘ (ರಿ ) ಪೆರ್ಡೂರು, ಪೆರ್ಡೂರು ಬಂಟರ ಸೌಹಾರ್ದ ಸಹಕಾರಿ (ನಿ), ಪೆರ್ಡೂರು, ಉದಯಕೃಷ್ಣಯ್ಯ ಶೆಟ್ಟಿ ಚಾರಿಟೇಬಲ್ ಟ್ರಸ್ಟ್‌ ಇವರ ಸಹಯೋಗದೊಂದಿಗೆ ಚಾಣಕ್ಯ ಇನ್ಸಿಟ್ಯೂಟ್ ಆಫ್ ಮ್ಯೂಸಿಕ್ ಹೆಬ್ರಿ ಇವರ ನೇತೃತ್ವದಲ್ಲಿ ವಾಯ್ಸ್ ಆಫ್ ಚಾಣಕ್ಯ -2024 ರಾಜ್ಯ ಮಟ್ಟದ ಟ್ರ್ಯಾಕ್ ಸಂಗೀತ ಸಮರದ ಸೆಮಿಫೈನಲ್ ಡಿ.7ರಂದು ಬೆಳಿಗ್ಗೆ 9:30 ರಿಂದ ಶ್ರೀಮತಿ ಸರ್ವಾಣಿ ಪಳ್ಳಿ ಶ್ರೀನಿವಾಸ ಹೆಗ್ಡೆ ಬಂಟರ ಸಮುದಾಯ ಭವನ, ಪೆರ್ಡೂರು ಇಲ್ಲಿ ನಡೆಯಲಿದೆ.

ಸಮಾರಂಭವನ್ನು ಕಾಪು ತಹಸೀಲ್ದಾರರು ಹಾಗೂ ಪೆರ್ಡೂರು ಶ್ರೀ ಅನಂತಪದ್ಮನಾಭ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಪ್ರತಿಭಾ ಆರ್. ಉದ್ಘಾಟಿಸಲಿದ್ದು ಪೆರ್ಡೂರು ಬಂಟರ ಸಂಘ ಹಾಗೂ ಪೆರ್ಡೂರು ಬಂಟರ ಸೌಹಾರ್ದ ಸಹಕಾರಿ(ನಿ) ಇದರ ಅಧ್ಯಕ್ಷ ಕೆ. ಶಾಂತರಾಮ ಸೂಡ ಅಧ್ಯಕ್ಷತೆ ವಹಿಸಲಿದ್ದಾರೆ.

ಮುನಿಯಾಲು ಉದಯ ಕೃಷ್ಣಯ್ಯಶೆಟ್ಟಿ ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷ ಉದಯ ಶೆಟ್ಟಿ ಮುನಿಯಾಲು, ಪೆರ್ಡೂರು ಬಂಟರ ಸೌಹಾರ್ದ ಸಹಕಾರಿ(ನಿ) ಇದರ ಉಪಾಧ್ಯಕ್ಷ ಸುಧಾಕರ್ ಶೆಟ್ಟಿ ಸಾಯಿಷ, ಪೆರ್ಡೂರು ಶ್ರೀ ಅನಂತಪದ್ಮನಾಭ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಟ್ರಸ್ಟಿ ಪ್ರಮೋದ್ ರೈ ಪಳಜೆ,ನಿಕಟ ಪೂರ್ವ ಅಧ್ಯಕ್ಷ ಮಹೇಶ್ ಶೆಟ್ಟಿ ಪೈಬೆಟ್ಟು, ಹಿರಿಯಡ್ಕ ರೈತರ ಸಹಕಾರಿ ಸಂಘ ಇದರ ಅಧ್ಯಕ್ಷ ಅಶೋಕ್ ಕುಮಾರ್ ಶೆಟ್ಟಿ,ಎಸ್.ಕೆ. ಗೋಲ್ಡಸ್ಮಿತ್ ಇಂಡಸ್ಟ್ರೀಯಲ್ ಕೋ- ಅಪರೇಟಿವ್ ಸೊಸೈಟಿ ಲಿ., ಮಂಗಳೂರು ಇದರ ಅಧ್ಯಕ್ಷ ಉಪೇಂದ್ರ ಆಚಾರ್ಯ ಪೆರ್ಡೂರು, ಕುಂಬಾರರ ಗುಡಿ ಕೈಗಾರಿಕಾ ಸಂಘ, ಪೆರ್ಡೂರು ಇದರ ಅಧ್ಯಕ್ಷ ಸಂತೋಷ ಕುಲಾಲ್ ಭಾಗವಹಿಸಲಿದ್ದಾರೆ.

ಮಧ್ಯಾಹ್ನ ನಡೆಯುವ ಸಮಾರೋಪ ಸಮಾರಂಭದಲ್ಲಿ ಪೆರ್ಡೂರು ಬಂಟರ ಸಂಘದ ಪ್ರಧಾನ ಕಾರ್ಯದರ್ಶಿ ಶ್ರೀಧರ್ ಕೆ. ಶೆಟ್ಟಿ ಕುತ್ಯಾರು ಬೀಡು, ಭಾಗವಹಿಸಿದ ಗಾಯಕರಿಗೆ ಪ್ರಮಾಣ ಪತ್ರ ವಿತರಿಸಲಿದ್ದು
ಭಾರತೀಯ ಮಾನವ ಹಕ್ಕುಗಳ ಮಂಡಳಿಯ ರಾಜ್ಯಾಧ್ಯಕ್ಷ ಪ್ರಸಾದ್ ರೈ,ಪೆರ್ಡೂರು ಅನಂತಪದ್ಮನಾಭ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಸದಸ್ಯ ಸಂತೆಕಟ್ಟೆ ರಾಮದಾಸ್ ನ್ಯಾಕ್, ರೈತರ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಶಾಂತ್ ಶೆಟ್ಟಿ, ಕ್ಯಾಂಪ್ಕೋ (ಲಿ) ನಿಂತಿಕಲ್ಲು ಶಾಖಾ ಪ್ರಬಂಧಕ
ರಮೇಶ್ ಡಿ, ಚಾಂತಾರು, ಸಂಗೀತ ಗುರು ಸ್ಮಿತಾ ನಾಗರಾಜ್ ಭಟ್ ಉಡುಪಿ ಮೊದಲಾದವರು ಭಾಗವಹಿಸಲಿದ್ದಾರೆ.

ರಾಜ್ಯದ ವಿವಿಧ ಜಿಲ್ಲೆಗಳಿಂದ 30 ಗಾಯಕರು ಭಾಗವಹಿಸಲಿದ್ದು ಕಾರ್ಯಕ್ರಮದ ನಡುವೆ ನೃತ್ಯ ವೈವಿಧ್ಯ ನಡೆಯಲಿದೆ ಎಂದು ಹೆಬ್ರಿಯ ಚಾಣಕ್ಯ ಶಿಕ್ಷಣ ಮತ್ತು ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಹೆಬ್ರಿ ಉದಯಕುಮಾರ್ ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.