ಕಾರ್ಕಳ: ತಾಲೂಕಿನ ನೀರೆ ಶಾಲಾ ಕ್ರಾಸ್ ಬಳಿ ಡಿ. 5ರಂದು ಕಾರು ಹಾಗೂ ಬೈಕ್ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರ ನೀರೆ ನಿವಾಸಿ ಶಂಕರ್ ಶೆಟ್ಟಿ (70) ಅವರು ಮೃತಪಟ್ಟಿದ್ದಾರೆ.
ಮೃತರು ಪತ್ನಿ, ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ. ಕಾರು ಢಿಕ್ಕಿಯ ರಭಸಕ್ಕೆ ಶಂಕರ್ ಶೆಟ್ಟಿ ಅವರಿಗೆ ತೀವ್ರ ಸ್ವರೂಪದ ಗಾಯಗಳಾಗಿದ್ದು, ಅವರನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಲಾಯಿತಾದರೂ, ದಾರಿ ಮಧ್ಯೆ ಮೃತಪಟ್ಟಿದ್ದಾರೆ.
ಶಂಕರ್ ಶೆಟ್ಟಿಯವರು ಕಾಂಗ್ರೆಸ್ ಮುಖಂಡರಾಗಿದ್ದು, ನೀರೆ ಗ್ರಾಮ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ನೀರೆ ಜಡ್ಡಿನಂಗಡಿ ಹಾಲು ಉತ್ಪಾದಕರ ಸಂಘದ ಅಧ್ಯಕ್ಷರಾಗಿ, ನೀರೆ ಗರೋಡಿಯ ಆಡಳಿತ ಮೊಕ್ತೇಸರರಾಗಿ, ನೀರೆ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದರು.