ಕುಂದಾಪುರ: ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

ಕುಂದಾಪುರ: ತಾಲೂಕಿನ ಅಸೋಡು ಸಮೀಪದ ರೈಲಿಗೆ ತಲೆ ಕೊಟ್ಟು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶುಕ್ರವಾರ ರಾತ್ರಿ ರೈಲ್ವೇ ಹಳಿಯಲ್ಲಿ ಸಂಭವಿಸಿದೆ.

ಮೃತಪಟ್ಟವರು ಕಾಳಾವರ ಸಮೀಪದ ನಿವಾಸಿ ಪ್ರಭಾಕರ ಶೆಟ್ಟಿ ಎಂದು ತಿಳಿದು ಬಂದಿದೆ. ಅವರ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ಸಿಗಬೇಕಿದ್ದು, ಕುಂದಾಪುರ ಗ್ರಾಮಾಂತರ ಠಾಣಾ ಎಸ್‌ಐ ಭೀಮಾಶಂಕರ್‌ ಹಾಗೂ ಸಿಬಂದಿ ಭೇಟಿ ನೀಡಿದ್ದಾರೆ.