ಉಡುಪಿ: ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ವತಿಯಿಂದ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಉದ್ಯೋಗ ವಿನಿಮಯ ಕಛೇರಿಯಲ್ಲಿ ಡಿಸೆಂಬರ್ 10 ರಂದು ಬೆಳಗ್ಗೆ 10.30 ಕ್ಕೆ ಮಿನಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.
ಎಸ್.ಎಸ್.ಎಲ್.ಸಿ, ಪಿ.ಯು.ಸಿ ಐ.ಟಿ.ಐ, ಬಿ.ಕಾಂ, ಬಿ.ಇ ಇಂಜಿನಿಯರಿಂಗ್, ಗ್ರಾಫಿಕ್ ಡಿಸೈನ್ (ಕಂಪ್ಲಿಟೇಡ್ ಪೋಟೋ ಶ್ಯಾಪ್ ಕೋರ್ಸ್), ಡಿಪ್ಲೋಮಾ ಹಾಗೂ ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವ-ವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ಪ್ರತಿಯೊಂದಿಗೆ ಮಿನಿ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ: 8105618291, 9945856670, 9901472710 ಅಥವಾ 8105774936 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗಾಧಿಕಾರಿಗಳ ಕಛೇರಿ ಪ್ರಕಟಣೆ ತಿಳಿಸಿದೆ.