ಉಡುಪಿ: ಉಡುಪಿ ನಗರ ಠಾಣಾ ವ್ಯಾಪ್ತಿಯ ನಿವಾಸಿ ಹನುಮಂತಮ್ಮ (24) ಎಂಬ ಮಹಿಳೆ ಕಾಣೆಯಾದ ಬಗ್ಗೆ ದೂರು ದಾಖಲಾಗಿದೆ.
ಡಿ. 8ರಂದು ಪತಿ ಹಣ್ಣು ವ್ಯಾಪಾರಕ್ಕೆಂದು ಕೆಲಸಕ್ಕೆ ಹೋಗಿದ್ದು, ಮಧ್ಯಾಹ್ನ ಮನೆಗೆ ಬಂದಾಗ ಮನೆಗೆ ಬೀಗ ಹಾಕಿದ್ದು, ಆಕೆ ಮನೆಯಲ್ಲಿರಲಿಲ್ಲ.
ಆಕೆಯ ಮೊಬೈಲ್ಗೆ ಕರೆ ಮಾಡಿದಾಗ ಸ್ವಿಚ್ಆಫ್ ಬರುತ್ತಿದ್ದು, ನೆರೆಮನೆಯವರಲ್ಲಿ, ಸಂಬಂಧಿಕರಲ್ಲಿ ವಿಚಾರಿಸಿದಾಗ ಯಾವುದೇ ಮಾಹಿತಿ ದೊರಕಿಲ್ಲ. ಮಹಿಳೆಯ ಪತಿ ಈ ಬಗ್ಗೆ ದೂರು ನೀಡಿದ್ದಾರೆ.

















