ಪಡುಬಿದ್ರಿ: ಕಾರು ಢಿಕ್ಕಿ; ಪಾದಚಾರಿ ಮೃತ್ಯು.

ಪಡುಬಿದ್ರಿ: ಪಡುಬಿದ್ರಿ ಪೊಲೀಸ್‌ ಠಾಣೆ ವ್ಯಾಪ್ತಿಯ ಬಂಟರ ಸಂಘದ ಎದುರು ಗುರುವಾರ ಸಂಜೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರು ಢಿಕ್ಕಿ ಹೊಡೆದು ಪಡುಬಿದ್ರಿ ಕೆಳಗಿನ ಪೇಟೆಯ ಫ್ಯಾನ್ಸಿ ಅಂಗಡಿಯ ಮಾಲಕ ಶೇಖರ ಶೆಟ್ಟಿಗಾರ್‌ (65) ಮೃತಪಟ್ಟಿದ್ದಾರೆ.

ಮಂಗಳೂರು ಕಡೆಯಿಂದ ಉಡುಪಿಯತ್ತ ಸಾಗುತ್ತಿದ್ದ ಕಾರು ಢಿಕ್ಕಿ ಹೊಡೆದಿದೆ. ಕಾರು ಪಕ್ಕದ ಚರಂಡಿಗೆ ಮಗುಚಿ ಬಿದ್ದಿದೆ. ಶೇಖರ ಅವರು ನಡೆದುಕೊಂಡು ಹೋಗುತ್ತಿದ್ದರು. ತೀವ್ರ ಗಾಯಗೊಂಡ ಅವರನ್ನು ಆಸ್ಪತ್ರೆಗೆ ಸಾಗಿಸುವ ಹಾದಿಯಲ್ಲಿ ಮೃತಪಟ್ಟಿದ್ದಾರೆ. ಕಾರು ಚಾಲಕ ಸಣ್ಣ ಪುಟ್ಟ ಗಾಯದೊಂದಿಗೆ ಪಾರಾಗಿದ್ದಾನೆ.

ಪಡುಬಿದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.