ಮಂಗಳೂರು: ಡಿ.28 ರಂದು 8ನೇ ವರ್ಷದ ‘ಮಂಗಳೂರು ಕಂಬಳ’

ಮಂಗಳೂರು: ಬಂಗ್ರಕೂಳೂರಿನ ಗೋಲ್ಡ್‌ ಪಿಂಚ್‌ ಸಿಟಿಯ ರಾಮ-ಲಕ್ಷ್ಮಣ ಜೋಡು ಕರೆಯಲ್ಲಿ ಡಿ.28 ಹಾಗೂ 29ರಂದು 8ನೇ ವರ್ಷದ “ಮಂಗಳೂರು ಕಂಬಳ’ ಅತ್ಯಂತ ಸಂಭ್ರಮ ಸಡಗರದಿಂದ ನಡೆಯಲಿದೆ ಎಂದು ಕಂಬಳ ಸಮಿತಿ ಅಧ್ಯಕ್ಷರು ಹಾಗೂ ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ ತಿಳಿಸಿದ್ದಾರೆ.

ಮಂಗಳೂರಿನಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಂಗಳೂರು ಕಂಬಳವು ಕಳೆದ 7 ವರ್ಷಗಳಿಂದ ಮಂಗಳೂರಿನ ಗೋಲ್ಡ್‌ ಪಿಂಚ್‌ ಸಿಟಿಯಲ್ಲಿ ಎಂಆರ್‌ಜಿ ಗ್ರೂಪ್‌ನ ಚೇರ್ಮನ್‌ ಪ್ರಕಾಶ್‌ ಶೆಟ್ಟಿ ಅವರ ಗೌರವಾಧ್ಯಕ್ಷತೆಯಲ್ಲಿ ನಡೆಯುತ್ತಿದೆ.

ಹುತಾತ್ಮ ಯೋಧ, ನಮ್ಮೂರಿನ ಕ್ಯಾಪ್ಟನ್‌ ಎಂ.ವಿ. ಪ್ರಾಂಜಲ್‌ ಅವರ ತಂದೆ, ಎಂಆರ್‌ಪಿಎಲ್‌ನ ನಿವೃತ್ತ ಆಡಳಿತ ನಿರ್ದೇಶಕರಾದ ಎಂ.ವೆಂಕಟೇಶ್‌ ಅವರು ಮಂಗಳೂರು ಕಂಬಳ ಉದ್ಘಾಟಿಸಲಿದ್ದಾರೆ.

ಹಲವು ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಸಂಜೆ 6ಕ್ಕೆ ದಿ.ರತ್ನ ಮಾಧವ ಶೆಟ್ಟಿ ವೇದಿಕೆಯಲ್ಲಿ ಸಭಾ ಕಾರ್ಯಕ್ರಮ ನಡೆಯಲಿದ್ದು, ಎಂಆರ್‌ಜಿ ಗ್ರೂಪ್‌ನ ಸಿಎಂಡಿ ಡಾ.ಕೆ.ಪ್ರಕಾಶ್‌ ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ ಎಂದರು.