ಉಡುಪಿ: ಸಂಸ್ಕೃತಿ, ಆಚರಣೆಯ ಕುರಿತು ಅಭಿಮಾನವನ್ನು ಹೊಂದಿರುವ ಹೆಮ್ಮೆಯ ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರದಲ್ಲಿ ಸಂಭ್ರಮದಿಂದ ಹೊಸ ವರ್ಷವನ್ನು ಆಚರಿಸಲಾಯಿತು.
ಸಂಸ್ಥಾಪಕರಾದ ಸುಬ್ರಹ್ಮಣ್ಯ ಅವರು ಆಚರಣೆಯನ್ನು ದೀಪ ಬೆಳಗಿಸುವುದರ ಮೂಲಕ ಆರಂಭಿಸಿ ಎಲ್ಲರ ಜೀವನದಲ್ಲೂ ಹೊಸತನ, ಹೊಸ ಹುಮ್ಮಸ್ಸು ತುಂಬಲಿ ಎಂದು ಎಲ್ಲರಿಗೂ ಹೊಸ ವರ್ಷದ ಶುಭಾಶಯ ಕೋರಿದರು ಹಾಗೂ ಕಾಲೇಜಿನ ನಿರ್ದೇಶಕಿಯಾದ ಶ್ರೀಮತಿ ಮಮತಾ, ಪ್ರಾಂಶುಪಾಲರಾದ ಡಾ.ಸೀಮಾ.ಜಿ ಭಟ್, ಉಪಪ್ರಾಂಶುಪಾಲರಾದ
ಶ್ರೀಮತಿ ಸುಜಾತ, ಸಾಂಸ್ಕೃತಿಕ ಸಮಿತಿಯ ಸಂಚಾಲಕಿ ಶ್ರೀಮತಿ ರಾಝಿಕಾ ಹಾಗೂ ಎಲ್ಲಾ ಉಪನ್ಯಾಸಕರು ಹಾಗೂ ಉಪನ್ಯಾಸಕೇತರರು ಉಪಸ್ಥಿತರಿದ್ದರು.
ಕನ್ನಡ ಉಪನ್ಯಾಸಕಿ ಅನುಪಮ ಪಿ ಭಟ್ ಹೊಸ ವರ್ಷ ಆಚರಣೆಯ ಮಹತ್ವ, ಹಿನ್ನೆಲೆ ಕುರಿತು ಮಾತನಾಡಿದರು. ಕಾರ್ಯಕ್ರಮವನ್ನು ಉಪನ್ಯಾಸಕಿ ಕುಮಾರಿ ಸ್ವಾತಿ ನಿರೂಪಿಸಿದರು.