ಉಡುಪಿ: ಕಾಪು – ಬಂಟಕಲ್ಲು ರಸ್ತೆ ಇನ್ನಂಜೆ ಮಾರ್ಕೋಡಿ ಸೇತುವೆ ಬಳಿ ಮಳೆಯಿಂದ ಹಾನಿಯಾದ ಭಾಗದಲ್ಲಿ ತಡೆಗೋಡೆ ನಿರ್ಮಾಣ ಕಾಮಗಾರಿಗೆ ಲೋಕೋಪಯೋಗಿ ಇಲಾಖೆಯಿಂದ 40 ಲಕ್ಷ ರೂಪಾಯಿ ಅನುದಾನದ ಮಂಜೂರಾಗಿದ್ದು, ಇದರ ಗುದ್ದಲಿ ಪೂಜೆಯನ್ನು ಇಂದು ದಿನಾಂಕ ಜ.15 ರಂದು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು ನೆರವೇರಿಸಿದರು.

ಈ ಸಂದರ್ಭದಲ್ಲಿ ಇನ್ನಂಜೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಮಾಲಿನಿ ಶೆಟ್ಟಿ, ಉಪಾಧ್ಯಕ್ಷರಾದ ಸುರೇಖಾ ಶೆಟ್ಟಿ, ಇನ್ನಂಜೆ ಗ್ರಾಮ ಪಂಚಾಯತ್ ಸದಸ್ಯರಾದ ದಿವೇಶ್ ಶೆಟ್ಟಿ, ನಿತೇಶ್ ಸಾಲ್ಯಾನ್, ಸವಿತಾ ಶೆಟ್ಟಿ, ಮಲ್ಲಿಕಾ ಆಚಾರ್ಯ, ಪುಷ್ಪಾ ಹಾಗೂ ಸ್ಥಳೀಯರು ಮತ್ತು ಗುತ್ತಿಗೆದಾರರು ಉಪಸ್ಥಿತರಿದ್ದರು.













