ಡಿ.ಕೆ.ಶಿಗೆ ಇಡಿ ಕಿರುಕುಳ ನೀಡುತಿದೆ ಎಂದು ಆರೋಪಿಸಿ ಪ್ರತಿಭಟನೆ: ಹಲವರು ಪೊಲೀಸ್ ವಶ

ಮಂಗಳೂರು: ಮಾಜಿ ಸಚಿವ ಡಿ.ಕೆ.ಶಿವಕುಮಾರ್‌ ಅವರಿಗೆ ಇಡಿ ಕಿರುಕುಳ ನೀಡುತ್ತಿದೆ ಎಂದು ಆರೋಪಿಸಿ ಮಂಗಳೂರಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಮಂಗಳೂರಿನ ಮಲ್ಲಿಕಟ್ಟೆಯಲ್ಲಿ ಕಾಂಗ್ರೆಸ್ ಕಚೇರಿ ಎದುರು ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ್ದಾರೆ.
ಈ ವೇಳೆ ಪೊಲೀಸರು ಕಾಂಗ್ರೆಸ್ ಕಾರ್ಯಕರ್ತರನ್ನು ವಶಕ್ಕೆ ಪಡೆದುಕೊಂಡ ಘಟನೆ ನಡೆಯಿತು.
ಕೇಂದ್ರ ಸರಕಾರದ ಕೈಗೊಂಬೆಯಾಗಿ ವರ್ತಿಸಿ ಮಾಜಿ ಸಚಿವ ಡಿ.ಕೆ ಶಿವಕುಮಾರ್ ರಿಗೆ ಇಡಿ ಅನಗತ್ಯ ಕಿರುಕುಳ ನೀಡುತ್ತಿದೆ. ಕೇಂದ್ರ ಸರ್ಕಾರ ಇಡಿ ಇಲಾಖೆ ಹಾಗೂ ಆದಾಯ ತೆರಿಗೆ ಇಲಾಖೆ ಮೂಲಕ ರಾಜಕೀಯ ಷಡ್ಯಂತ್ರ ಮತ್ತು ದ್ವೇಷದ ರಾಜಕೀಯ ಮಾಡುತ್ತಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.