ಬೆಂಗಳೂರು: ಮುಖ್ಯಮಂತ್ರಿ ಶ್ರೀ ಬಿ.ಎಸ್ ಯಡಿಯೂರಪ್ಪ ಅವರ ಕಚೇರಿ ಕೃಷ್ಣಾದಲ್ಲಿ ಶುಕ್ರವಾರ ಚಿಕ್ಕಮಗಳೂರು ಜಿಲ್ಲೆಯ ಅಭಿವೃದ್ಧಿಗೆ ಸಂಬಂಧಿಸಿದಂತೆ ಸಭೆ ನಡೆಯಿತು.
ಪ್ರಮುಖ ವಿಷಯಗಳಾದ ನೆರೆ ಪರಿಹಾರ, ಜಿಲ್ಲೆಯಲ್ಲಿ ವೈದ್ಯಕೀಯ ಕಾಲೇಜು ಸ್ಥಾಪನೆ, ಇಎಸ್ ಐ ಕಾಯ್ದೆಯಡಿ ನೊಂದಣಿ, ಕಿರು ವಿಮಾನ ನಿಲ್ದಾಣ ಕಾಮಗಾರಿ, ಜಲಧಾರೆ ಯೋಜನೆ ಹಾಗೂ ಇತರ ವಿಷಯಗಳ ಬಗ್ಗೆ ಚರ್ಚೆ ನಡೆಯಿತು.
ಉಡುಪಿ-ಚಿಕ್ಕಮಗಳೂರು ಲೋಕಸಭಾ ಸದಸ್ಯರಾದ ಶೋಭಾ ಕರಂದ್ಲಾಜೆ, ಜಿಲ್ಲೆಯ ಶಾಸಕರು, ಜನಪ್ರತಿನಿಧಿಗಳು ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಾಯಿತು.












