ಕಚ್ಚೂರು ಶ್ರೀ ಮಾಲ್ತಿ ದೇವಿ ದೇವಸ್ಥಾನ, ಶ್ರೀ ಬಬ್ಬು ಸ್ವಾಮಿ ಮೂಲ ಕ್ಷೇತ್ರದ ವಾರ್ಷಿಕ ಮಹೋತ್ಸವ: ಉಪವಲಯ ಅರಣ್ಯಾಧಿಕಾರಿ ಹರೀಶ್ ಬಾರ್ಕೂರು ಅವರಿಗೆ ಗೌರವ.

ಬಾರಕೂರು: ಶ್ರೀ ಕ್ಷೇತ್ರ ಬಾರ್ಕೂರು ಕಚ್ಚೂರು ಶ್ರೀ ಮಾಲ್ತಿ ದೇವಿ ದೇವಸ್ಥಾನ, ಶ್ರೀ ಬಬ್ಬು ಸ್ವಾಮಿ ಮೂಲ ಕ್ಷೇತ್ರದ ವಾರ್ಷಿಕ ಜಾತ್ರಾ ಮಹೋತ್ಸವದ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಿತು.

ಶ್ರೀ ಕ್ಷೇತ್ರದ ಎಲ್ಲಾ ಕಾರ್ಯಕ್ರಮಗಳಲ್ಲಿ ಸಕ್ರೀಯವಾಗಿತೊಡಗಿಸಿ ಕೊಂಡಿರುವ ಉಪವಲಯ ಅರಣ್ಯಾಧಿಕಾರಿ ಹರೀಶ್ ಬಾರ್ಕೂರು ರಂಗನಕೆರೆ ಇವರನ್ನು ಕಾಪು ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರ ಉಪಸ್ಥಿಯಲ್ಲಿ ಅಭಿನಂದಿಸಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ದೇವಸ್ಥಾನದ ಧರ್ಮದರ್ಶಿಗಳಾದ ಗೋಕುಲ್ ದಾಸ್ ಬಾರ್ಕೂರು, ಶ್ರೀಮತಿ ಗೀತಾಂಜಲಿ ಸುವರ್ಣ, ಆಡಳಿತ ಮಂಡಳಿಯ ಅಧ್ಯಕ್ಷರಾದ ಶಿವಪ್ಪನಂತೂರು, ಆಡಳಿತ ಮಂಡಳಿಯ ಪ್ರಧಾನ ಕಾರ್ಯದರ್ಶಿಗಳಾದ ಪ್ರೇಮಾನಂದ ಬಾರ್ಕೂರು ಉಪಸ್ಥಿತರಿದ್ದರು.