“ಬೀಜಗಳ ರಾಜ” ಎಂದು ಕರೆಯಲ್ಪಡುವ ಬಾದಾಮಿಯಲ್ಲಿ ಅನೇಕ ಆರೋಗ್ಯ ಪ್ರಯೋಜನಗಳಿವೆ. ಇದೊಂದು ಪವರ್-ಪ್ಯಾಕ್ಡ್ ಸೂಪರ್ಫುಡ್ ಆಗಿದೆ. ಚರ್ಮದ ಆರೋಗ್ಯವನ್ನು ಹೆಚ್ಚಿಸುತ್ತದೆ. ಜೀರ್ಣಾಂಗ ವ್ಯವಸ್ಥೆಯನ್ನು ಸುಧಾರಿಸುತ್ತದೆ. ನಮ್ಮ ದೈನಂದಿನ ಆಹಾರಕ್ರಮದಲ್ಲಿ ಬಾದಾಮಿಯನ್ನು ಸೇರಿಸುವುದರಿಂದ ಹಲವಾರು ಪ್ರಯೋಜನಗಳನ್ನು ಪಡೆಯಬಹುದು. ವಿಶೇಷವಾಗಿ ಖಾಲಿ ಹೊಟ್ಟೆಗೆ ನೆನೆಸಿದ ಬಾದಾಮಿ ಬೀಜಗಳನ್ನು ಸೇವಿಸುವುದರಿಂದ ಪೌಷ್ಟಿಕಾಂಶದ ಸಾಮರ್ಥ್ಯವನ್ನು ಹೆಚ್ಚಿಸುತ್ತದೆ.
ಬಾದಾಮಿಯನ್ನು ರಾತ್ರಿಯಿಡೀ ನೆನೆಸಿಟ್ಟು ಬೆಳಿಗ್ಗೆ ಅದನ್ನು ಸೇವಿಸಬೇಕು. ಇದು ಮೆದುಳಿನ ಕಾರ್ಯವನ್ನು ಹೆಚ್ಚಿಸಲು ಸಹಕಾರಿಯಾಗಿದೆ. ಹೃದಯದ ಆರೋಗ್ಯವನ್ನು ಉತ್ತೇಜಿಸುತ್ತದೆ. ನೆನೆಸಿದ ಬಾದಾಮಿ ಸೇವಿಸುವುದನ್ನು ನಮ್ಮ ದೈನಂದಿನ ದಿನಚರಿಯಾಗಿಸುವುದು ಉತ್ತಮ. ಖಾಲಿ ಹೊಟ್ಟೆಗೆ ಪ್ರತಿದಿನ 5 ನೆನೆಸಿದ ಬಾದಾಮಿ ತಿನ್ನುವುದರಿಂದಾಗುವ 10 ಆರೋಗ್ಯ ಪ್ರಯೋಜನಗಳು ಇಲ್ಲಿವೆ.ಪ್ರತಿದಿನ ಬೆಳಿಗ್ಗೆ ಖಾಲಿ ಹೊಟ್ಟೆಗೆ ಪ್ರತಿದಿನ 5 ನೆನೆಸಿದ ಬಾದಾಮಿ ತಿನ್ನುವುದರಿಂದಾಗುವ 10 ಆರೋಗ್ಯ ಪ್ರಯೋಜನಗಳು:

ಜೀರ್ಣಕ್ರಿಯೆಗೆ ಸಹಾಯ ಮಾಡುತ್ತದೆ:
ನೆನೆಸಿಟ್ಟ ಬಾದಾಮಿ ತಿನ್ನುವುದರಿಂದ ಜೀರ್ಣಕ್ರಿಯೆಗೆ ಸಹಕಾರಿಯಾಗಿದೆ. ಈ ಪ್ರಕ್ರಿಯೆ ಪೋಷಕಾಂಶಗಳ ಹೀರಿಕೊಳ್ಳುವಿಕೆಯನ್ನು ಹೆಚ್ಚಿಸುತ್ತದೆ ಮತ್ತು ಹೊಟ್ಟೆ ಉಬ್ಬರವನ್ನು ಕಡಿಮೆ ಮಾಡುತ್ತದೆ.
ಕೊಲೆಸ್ಟ್ರಾಲ್ ಮತ್ತು ಹೃದಯದ ಆರೋಗ್ಯ:
ಖಾಲಿ ಹೊಟ್ಟೆಗೆ ನೆನೆಸಿಟ್ಟ ಬಾದಾಮಿ ಸೇವಿಸುವುದು ಹೃದಯದ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ನೆನೆಸಿದ ಬಾದಾಮಿಯಲ್ಲಿರುವ ಮೊನೊಸಾಚುರೇಟೆಡ್ ಕೊಬ್ಬುಗಳು ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಅದರೊಂದಿಗೆ ಹೃದ್ರೋಗದ ಅಪಾಯವನ್ನು ಕೂಡಾ ಕಡಿಮೆ ಮಾಡುತ್ತದೆ.
ತೂಕ ನಷ್ಟಕ್ಕೆ ಸಹಕಾರಿ:
ನೆನೆಸಿದ ಬಾದಾಮಿ ತಿನ್ನುವುದರಿಂದ ಹೆಚ್ಚು ಕಾಲ ಹೊಟ್ಟೆ ತುಂಬಿದ ಅನುಭವ ಹೊಂದಬಹುದು. ಇದು ಅತಿಯಾಗಿ ತಿನ್ನುವುದನ್ನು ತಡೆಯುತ್ತದೆ. ಅದರಲ್ಲಿರುವ ಹೆಚ್ಚಿನ ಫೈಬರ್ ಅಂಶ ತೂಕ ನಷ್ಟಕ್ಕೆ ಸಹಕಾರಿಯಾಗಿದೆ. ಬಾದಾಮಿ ತೂಕ ನಿರ್ವಹಣೆಗೆ ಅತ್ಯುತ್ತಮ ಆಹಾರವಾಗಿದೆ.
ಮೆದುಳಿನ ಆರೋಗ್ಯಕ್ಕೆ:
ಬಾದಾಮಿ ಉತ್ಕರ್ಷಣ ನಿರೋಧಕಗಳು ಮತ್ತು ಆರೋಗ್ಯಕರ ಕೊಬ್ಬುಗಳಲ್ಲಿ ಸಮೃದ್ಧವಾಗಿದೆ. ಇದು ಮೆದುಳಿನ ಆರೋಗ್ಯಕ್ಕೆ ಪ್ರಯೋಜನಕಾರಿಯಾಗಿದೆ. ಬಾದಾಮಿಯ ನಿಯಮಿತ ಸೇವನೆ ಮೆದುಳಿನ ಆರೋಗ್ಯಕ್ಕೆ ಉತ್ತಮವಾಗಿದೆ. ನ್ಯೂರೋ ಡಿಜೆನೆರೆಟಿವ್ ಕಾಯಿಲೆಗಳ ಅಪಾಯವನ್ನು ಕಡಿಮೆ ಮಾಡುತ್ತದೆ.
ಆರೋಗ್ಯಕರ ತ್ವಚೆಗೆ:
ನೆನೆಸಿದ ಬಾದಾಮಿಯಲ್ಲಿರುವ ವಿಟಮಿನ್ ಇ ಅಂಶವು ತ್ವಚೆಯ ಪ್ರಯೋಜನಗಳಿಗೆ ಹೆಸರುವಾಸಿಯಾಗಿದೆ. ಇದು ಆಕ್ಸಿಡೇಟಿವ್ ಒತ್ತಡವನ್ನು ಎದುರಿಸಲು ಸಹಾಯ ಮಾಡುತ್ತದೆ ಮತ್ತು ಆರೋಗ್ಯಕರ ಮೈಬಣ್ಣವನ್ನು ಉತ್ತೇಜಿಸುತ್ತದೆ. ಇದರೊಂದಿಗೆ ಚರ್ಮಕ್ಕೆ ನೈಸರ್ಗಿಕ ಹೊಳಪನ್ನು ನೀಡುತ್ತದೆ.
ರಕ್ತದಲ್ಲಿರುವ ಸಕ್ಕರೆಯ ಮಟ್ಟ ನಿಯಂತ್ರಿಸಲು:
ನೆನೆಸಿದ ಬಾದಾಮಿಯನ್ನು ಸೇವಿಸುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಬಹುದು. ಆರೋಗ್ಯಕರ ಕೊಬ್ಬುಗಳು ಮತ್ತು ಫೈಬರ್ ಅಂಶ ಸಕ್ಕರೆಯ ಹೀರಿಕೊಳ್ಳುವಿಕೆಯನ್ನು ನಿಧಾನಗೊಳಿಸಲು ಒಟ್ಟಾಗಿ ಕೆಲಸ ಮಾಡುತ್ತದೆ. ಇದು ಮಧುಮೇಹ ಹೊಂದಿರುವ ವ್ಯಕ್ತಿಗಳಿಗೆ ಪ್ರಯೋಜನಕಾರಿಯಾಗಿದೆ.
ಮೂಳೆಗಳನ್ನು ಬಲಪಡಿಸುತ್ತದೆ:
ಬಾದಾಮಿಯು ಕ್ಯಾಲ್ಸಿಯಂ ಮತ್ತು ಮೆಗ್ನೀಸಿಯಮ್ನ ಉತ್ತಮ ಮೂಲವಾಗಿದೆ. ಇವೆರಡೂ ಬಲವಾದ ಮೂಳೆಗಳನ್ನು ಕಾಪಾಡಿಕೊಳ್ಳಲು ಅವಶ್ಯಕ. ಬಾದಾಮಿಯ ನಿಯಮಿತ ಸೇವನೆ ಆಸ್ಟಿಯೊಪೊರೋಸಿಸ್ ಮತ್ತು ಇತರ ಮೂಳೆ ಸಂಬಂಧಿತ ಸಮಸ್ಯೆಗಳನ್ನು ತಡೆಯಲು ಸಹಾಯ ಮಾಡುತ್ತದೆ.
ರೋಗನಿರೋಧಕ ಕಾರ್ಯ ಹೆಚ್ಚಿಸುತ್ತದೆ:
ನೆನೆಸಿದ ಬಾದಾಮಿಯಲ್ಲಿ ಕಂಡುಬರುವ ಉತ್ಕರ್ಷಣ ನಿರೋಧಕಗಳು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಇವು ನಮ್ಮ ದೇಹವನ್ನು ಸೋಂಕುಗಳು ಮತ್ತು ರೋಗಗಳಿಂದ ರಕ್ಷಿಸುತ್ತದೆ.
ಶಕ್ತಿಯನ್ನು ಹೆಚ್ಚಿಸುತ್ತದೆ:
ನೆನೆಸಿದ ಬಾದಾಮಿ ಶಕ್ತಿಯ ಉತ್ತಮ ಮೂಲವಾಗಿದೆ. ಆರೋಗ್ಯಕರ ಕೊಬ್ಬುಗಳು ಮತ್ತು ಪ್ರೊಟೀನ್ ಅಂಶ ನಿರಂತರ ಶಕ್ತಿಯ ಬಿಡುಗಡೆಯನ್ನು ಒದಗಿಸುತ್ತದೆ.
ಆರೋಗ್ಯಕರ ಕೂದಲ ಬೆಳವಣೆಗೆಗೆ:
ನೆನೆಸಿದ ಬಾದಾಮಿಯಲ್ಲಿರುವ ಪೋಷಕಾಂಶಗಳು ಕೂದಲಿಗೆ ಸಹ ಪ್ರಯೋಜನವನ್ನು ನೀಡುತ್ತದೆ. ವಿಟಮಿನ್ ಇ ಮತ್ತು ಅಗತ್ಯವಾದ ಕೊಬ್ಬಿನಾಮ್ಲಗಳು ಕೂದಲಿನ ಬೆಳವಣಿಗೆಯನ್ನು ಉತ್ತೇಜಿಸುತ್ತದೆ ಮತ್ತು ಕೂದಲು ಉದುರುವುದನ್ನು ತಡೆಯುತ್ತದೆ.













