ಚಲಿಸುತ್ತಿದ್ದ ಬೈಕ್ ಮೇಲೆ ಮರ ಬಿದ್ದು 3 ವರ್ಷದ ಮಗು ಮೃತ್ಯು.

ಬೆಂಗಳೂರು: ಬೆಂಗಳೂರಿನ ಪುಲಕೇಶಿನಗರ ಪೊಲೀಸ್ ಠಾಣಾ ವ್ಯಾಪ್ತಿಯ ಜೀವನಹಳ್ಳಿಯಲ್ಲಿ ಚಲಿಸುತ್ತಿದ್ದ ಬೈಕ್ ಮೇಲೆ ಮರ ಬಿದ್ದ ಪರಿಣಾಮ ಮೂರು ವರ್ಷದ ಹೆಣ್ಣು ಸಾವನ್ನಪ್ಪಿರುವ ಘಟನೆ ಮಾ.22 ರಂದು ರಾತ್ರಿ ನಡೆದಿದೆ.

ಬಾಲಕಿಯನ್ನು ಕಮ್ಮನಹಳ್ಳಿ ಬಳಿಯ ಕುಳ್ಳಪ್ಪ ಸರ್ಕಲ್ ನಿವಾಸಿಗಳಾದ ಶಕ್ತಿ ಮತ್ತು ಸತ್ಯ ದಂಪತಿಯ 3ವರ್ಷದ ಮಗು ರಕ್ಷಾ ಎಂದು ಗುರುತಿಸಲಾಗಿದೆ.

ರಕ್ಷಾ ತನ್ನ ತಂದೆ ಸತ್ಯ ಜೊತೆಗೆ ಬೈಕ್ ನಲ್ಲಿ ತೆರಳುತ್ತಿದ್ದಾಗ ಗಾಳಿ ಮಳೆಗೆ ರಸ್ತೆ ಬದಿಯಲ್ಲಿದ್ದ ಮರ ಬಿದ್ದಿದ್ದು, ಈ ಪರಿಣಾಮ ಬೈಕ್ ನ ಮುಂಭಾಗದಲ್ಲಿ ಕುಳಿತ್ತಿದ್ದ ರಕ್ಷಾ ತಲೆ ಮೇಲೆಯೇ ಮರದ ತುಂಡು ಬಿದ್ದು ತೀವ್ರ ರಕ್ತಸ್ರಾವವಾಗಿ ಮೃತಪಟ್ಟಿದ್ದಾಳೆ.