ಬೆಂಗಳೂರು: ಮಾಜಿ ಸಚಿವ ಡಿಕೆ ಶಿವಕುಮಾರ್ ಅವರನ್ನು ಬಂಧನದಲ್ಲಿಟ್ಟುಕೊಂಡು ವಿಚಾರಣೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯ, ಅಕ್ರಮ ಹಣ ವ್ಯವಹಾರ ಆರೋಪದ ಮೇಲೆ ಅವರ ಪುತ್ರಿ ಐಶ್ವರ್ಯಾಗೆ ಇಡಿ ಸಮನ್ಸ್ ಜಾರಿ ಮಾಡಿ, ಸೆ.12ರಂದು ಖುದ್ದು ಹಾಜರಾಗುವಂತೆ ಸೂಚಿಸಿದೆ.
ಬೆಂಗಳೂರಿನ ಸದಾಶಿವನಗರದಲ್ಲಿರುವ ಡಿ.ಕೆ. ಶಿವಕುಮಾರ್ ಅವರ ಮನೆಗೆ ಮಂಗಳವಾರ ಅಪರಾಹ್ನ ಆಗಮಿಸಿದ ಇಡಿ ಅಧಿಕಾರಿಗಳು ಮನೆ ಬಾಗಿಲಿಗೆ ಸಮನ್ಸ್ ಪ್ರತಿ ಅಂಟಿಸಿ ಹಿಂದಿರುಗಿದ್ದರು. ಅದರಲ್ಲಿ ಸೆ.12ರಂದು ವಿಚಾರಣೆಗೆ ಹಾಜರಾಗುವಂತೆ ಐಶ್ವರ್ಯಾಗೆ ಸೂಚನೆ ನೀಡಲಾಗಿದೆ.
ಡಿಕೆ ಶಿವಕುಮಾರ್ ಅವರ ಪುತ್ರಿ ಐಶ್ವರ್ಯಾ ಅವರ ಹೆಸರಿನಲ್ಲಿ ಕೋಟಿಗಟ್ಟಲೆ ಹಣ ಹೂಡಿಕೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಸೋಲ್ ಆಂಡ್ ಸೇಲ್ ಎಂಬ ಕಂಪೆನಿಯಲ್ಲಿ ಐಶ್ವರ್ಯಾ ಹೆಸರಿನಲ್ಲಿ 78 ಕೋಟಿ ರೂ. ಹೂಡಿಕೆ ಮಾಡಲಾಗಿದೆ. ಈ ಸಂಬಂಧ ಸೆ.12ರಂದು ವಿಚಾರಣೆಗೆ ಹಾಜರಾಗುವಂತೆ ಐಶ್ವರ್ಯಾ ಅವರಿಗೆ ಇ.ಡಿ ಸಮನ್ಸ್ ಸೂಚನೆ ನೀಡಿದೆ.












