ಉಡುಪಿ:ಪ್ರತಿಷ್ಟಿತ ಶಾಲೆಗಳಲ್ಲಿ ಪ್ರವೇಶಾತಿ : ಅರ್ಜಿ ಆಹ್ವಾನ

ಉಡುಪಿ: ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಪ್ರತಿಷ್ಟಿತ ಶಾಲೆ ಯೋಜನೆಯಡಿ
ಜಿಲ್ಲಾ ವ್ಯಾಪ್ತಿಯಲ್ಲಿನ ಪ್ರತಿಷ್ಠಿತ ಶಾಲೆಗಳಿಗೆ ಅರ್ಹ ಪರೀಕ್ಷೆಯ ಮೂಲಕ ಪ್ರವೇಶಾವಕಾಶ ಕಲ್ಪಿಸಲು ಪ.ಜಾತಿಯ ಅರ್ಹ ಪ್ರತಿಭಾವಂತ ವಿದ್ಯಾರ್ಥಿಗಳಿಂದ ಇಲಾಖೆಯ ವೆಬ್‌ಸೈಟ್ https://www.sw.kar.nic.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಮೇ 3 ಕೊನೆಯ ದಿನ. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ ನಂತರ ಒಂದು ವಾರದೊಳಗೆ ಅರ್ಜಿಯನ್ನು ಹಾಗೂ ಸಂಬಂಧಿಸಿದ ಎಲ್ಲಾ ದಾಖಲಾತಿಗಳನ್ನು ಉಪ ನಿರ್ದೇಶಕರ ಕಛೇರಿ, ಸಮಾಜ ಕಲ್ಯಾಣ ಇಲಾಖೆ. ರಜತಾದ್ರಿ, ಮಣಿಪಾಲ ಇಲ್ಲಿ ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿ ಹಾಗೂ ವಿವರಗಳಿಗಾಗಿ ದೂರವಾಣಿ ಸಂಖ್ಯೆ: 0820-2574892 ಅನ್ನು ಕಛೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.