ಉಡುಪಿ: ಈಡಿ, ಸಿಬಿಐ, ಐಟಿ ದುರುಪಯೋಗ ವಿರೋಧಿಸಿ ಕಾಂಗ್ರೆಸ್ ಪ್ರತಿಭಟನೆ.

ಉಡುಪಿ: ಪ್ರಜಾಪ್ರಭುತ್ವದ ಅಂಗ ಸಂಸ್ಥೆಗಳಾದ ಈಡಿ, ಸಿಬಿಐ, ಐಟಿಯನ್ನು ದ್ವೇಷ ರಾಜಕಾರಣ ಕ್ಕಾಗಿ ದುರುಪಯೋಗ ಪಡಿಸಿಕೊಂಡು ವಿರೋಧ ಪಕ್ಷದ ನಾಯಕರ ಧ್ವನಿಯನ್ನು ಧಮನಗೊಳಿಸುತ್ತಿರುವ ಕೇಂದ್ರ ಬಿಜೆಪಿ ಸರಕಾರದ ವಿರುದ್ಧ ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ನೇತೃತ್ವದಲ್ಲಿ ಬುಧವಾರ ಆದಿಉಡುಪಿಯಲ್ಲಿರುವ ಆದಾಯ ತೆರಿಗೆ ಕಚೇರಿಯ ಮುಂದೆ ಪ್ರತಿಭಟನೆ ನಡೆಸಲಾಯಿತು.

ಪ್ರತಿಭಟನಕಾರರನ್ನುದ್ದೇಶಿಸಿ ಮಾತನಾಡಿದ ವಿಧಾನ ಪರಿಷತ್ ಸದಸ್ಯ, ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ್ ಭಂಡಾರಿ, ದೇಶದ ಸ್ವಾತಂತ್ರ್ಯಕ್ಕಾಗಿ ನೆಹರು ತನ್ನ ಇಡೀ ಸಂಪತ್ತು ಒತ್ತೆ ಇಟ್ಟು 1938ರಲ್ಲಿ ನ್ಯಾಶನಲ್ ಹೆರಾಲ್ಡ್ ಪತ್ರಿಕೆಯನ್ನು ಆರಂಭಿಸಿದ್ದರು. ಇದೀಗ ಕೇಂದ್ರ ಬಿಜೆಪಿ ಸರಕಾರ ಗಾಂಧಿ ಕುಟುಂಬದ ಮೇಲೆ ಧ್ವೇಷ ರಾಜಕಾರಣ ಮಾಡುತ್ತಿರುವುದು ಪ್ರಜಾಪ್ರಭುತ್ವದ ಕಗ್ಗೊಲೆಯಾಗಿದೆ. ಬಿಜೆಪಿ ಸರಕಾರ ಈಡಿ ಮೂಲಕ ವಿರೋಧ ಪಕ್ಷಗಳ ಕೈಗಳನ್ನು ಕಟ್ಟಿ ಹಾಕಲು ಮುಂದಾಗುತ್ತಿದೆ ಎಂದು ಆರೋಪಿಸಿದರು.ನಮ್ಮ ಇಡೀ ಸಂಪತ್ತನ್ನು ದೇಶಕ್ಕೆ ಸಮರ್ಪಣೆ ಮಾಡಿದ ಗಾಂಧಿ ಕುಟುಂಬದ ಮೇಲೆ ಕ್ಷುಲ್ಲಕ ಕಾರಣ ನೀಡಿ ಜೈಲಿಗೆ ಕಳುಹಿಸುವ ಷಡ್ಯಂತರವನ್ನು ಕೇಂದ್ರ ಬಿಜೆಪಿ ಸರಕಾರ ಮಾಡುತ್ತಿದೆ. ಇದಕ್ಕೆ ದೇಶದ ಜನತೆ ತಕ್ಕ ಉತ್ತರ ನೀಡಲಿದ್ದಾರೆ. ನಮ್ಮ ಹಿರಿಯರು ಕಟ್ಟಿಕೊಟ್ಟ ಈ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಮುಂದಿನ ಪೀಳಿಗೆ ಕೊಂಡೊಯ್ಯುವ ಜವಾಬ್ದಾರಿ ನಮ್ಮ ಮೇಲಿದೆ. ಅದಕ್ಕಾಗಿ ಬಿಜೆಪಿಯ ಈ ಸರ್ವಾಧಿಕಾರವನ್ನು ನಾವು ವಿರೋಧಿಸಬೇಕಾಗಿದೆ ಎಂದರು.

ಪ್ರತಿಭಟನೆಯಲ್ಲಿ ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಕೆಪಿಸಿಸಿ ಉಪಾಧ್ಯಕ್ಷ ಎಂ.ಎ.ಗಫೂರ್, ಜಿಲ್ಲಾ ಕಾರ್ಯಾಧ್ಯಕ್ಷ ಕಿಶನ್ ಹೆಗ್ಡೆ ಕೊಳ್ಕೆಬೈಲು, ನಾಯಕರಾದ ದಿನೇಶ್ ಹೆಗ್ಡೆ ಮೊಳಹಳ್ಳಿ, ಪ್ರಸಾದ್ ರಾಜ್ ಕಾಂಚನ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ರಮೇಶ್ ಕಾಂಚನ್, ಶುಭದ್ ರಾವ್, ಗೋಪಿನಾಥ್ ಭಟ್, ಅರವಿಂದ್ ಪೂಜಾರಿ, ಪ್ರದೀಪ್ ಶೆಟ್ಟಿ, ನವೀನ್ ಚಂದ್ರ ಸುವರ್ಣ, ರಾಘವೇಂದ್ರ ಶೆಟ್ಟಿ, ಹರಿಪ್ರಸಾದ್ ಶೆಟ್ಟಿ, ಮುಖಂಡರಾದ ರಾಜು ಪೂಜಾರಿ, ಮುರಳಿ ಶೆಟ್ಟಿ, ದಿನೇಶ್ ಪುತ್ರನ್, ಹರೀಶ್ ಕಿಣಿ, ಭುಜಂಗ ಶೆಟ್ಟಿ, ಕೀರ್ತಿ ಶೆಟ್ಟಿ, ಅಮೃತ್ ಶೆಣೈ, ಫಾ.ವಿಲಿಯಮ್ ಮಾರ್ಟಿಸ್, ಸದಾಶಿವ ಕಟ್ಟೆಗುಡ್ಡೆ, ಮಹಾಬಲ ಕುಂದರ್, ಕೃಷ್ಣ ಶೆಟ್ಟಿ ಬಜಗೋಳಿ, ವಿಶ್ವಾಸ್ ಅಮೀನ್, ಹಬೀಬ್ ಅಲಿ, ವರೋನಿಕಾ ಕರ್ನೆಲಿಯೋ, ಗೀತಾ ವಾಗ್ಳೆ, ಡಾ.ಸುನಿತಾ ಶೆಟ್ಟಿ, ಜ್ಯೋತಿ ಹೆಬ್ಬಾರ್, ಮೀನಾಕ್ಷಿ ಮಾಧವ ಬನ್ನಂಜೆ, ರೋಶ್ನಿ ಒಲಿವರ್, ಸತೀಶ್ ಕೊಡವೂರು, ಸಂಧ್ಯಾ ತಿಲಕ್‌ರಾಜ್, ಸುಕನ್ಯಾ ಪೂಜಾರಿ, ಸುರೇಶ್ ಶೆಟ್ಟಿ ಬನ್ನಂಜೆ, ಪ್ರಶಾಂತ್ ಜತ್ತನ್ನ, ಜಯಕುಮಾರ್, ಸಜ್ಜನ್ ಶೆಟ್ಟಿ ಉಪಸ್ಥಿತರಿದ್ದರು.