ಉಡುಪಿ: ಎ.26ರಿಂದ ಜೂ.4ರವರೆಗೆ ಜಾನುವಾರುಗಳಿಗೆ ಕಾಲುಬಾಯಿ ಜ್ವರ ರೋಗ ಲಸಿಕಾ ಕಾರ್ಯಕ್ರಮ; ಜಿಲ್ಲಾಧಿಕಾರಿ

ಉಡುಪಿ: ರಾಷ್ಟ್ರೀಯ ಜಾನುವಾರು ರೋಗಗಳ ನಿಯಂತ್ರಣ ಕಾರ್ಯಕ್ರಮದಡಿ ಜಾನುವಾರು ಗಳಿಗೆ ಏಳನೇ ಸುತ್ತಿನ ಕಾಲುಬಾಯಿ ಜ್ವರ ರೋಗ ಲಸಿಕಾ ಕಾರ್ಯಕ್ರಮ ಎಪ್ರಿಲ್ 26ರಿಂದ ಜೂನ್ 4ರವರೆಗೆ ಜಿಲ್ಲೆಯಾದ್ಯಂತ ನಡೆಯಲಿದ್ದು, ಎಲ್ಲಾ ಜಾನುವಾರುಗಳಿಗೆ ಲಸಿಕೆ ಹಾಕುವ ಮೂಲಕ ಜಿಲ್ಲೆಯಲ್ಲಿ ಪ್ರತಿಶತಃ ನೂರರಷ್ಟು ಗುರಿ ಸಾಧನೆ ಮಾಡುವಂತೆ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಇಲಾಖೆಯ ಅಧಿಕಾರಿಗಳಿಗೆ ಸೂಚನೆಗಳನ್ನು ನೀಡಿದ್ದಾರೆ.

ಶನಿವಾರ ಮಣಿಪಾಲದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಾನುವಾರು ಕಾಲುಬಾಯಿ ಜ್ವರ ರೋಗ ಲಸಿಕಾ ಕಾರ್ಯಕ್ರಮದ ಜಿಲ್ಲಾ ಮಟ್ಟದ ನಿರ್ವಹಣಾ ಸಮಿತಿ ಸಭೆ ಹಾಗೂ ಪಶು ಸಂಜೀವಿನಿ ವಾಹನಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.

ಜಾನುವಾರುಗಳಲ್ಲಿ ಕಂಡು ಬರುವ ಕಾಲುಬಾಯಿ ರೋಗ ವೈರಾಣು ವಿನಿಂದ ಬರುವ ಅಂಟು ರೋಗವಾ ಗಿದ್ದು, ಗೊರಸು ಕಾಲುಗಳನ್ನು ಹೊಂದಿರುವ ಎಲ್ಲಾ ಪ್ರಾಣಿಗಳಲ್ಲಿ ಈ ರೋಗ ಕಂಡುಬರುತ್ತದೆ. ರೈತರಿಗೆ ಆರ್ಥಿಕ ಸಂಕಷ್ಟ ಉಂಟುಮಾಡುವ ಈ ರೋಗವನ್ನು ನಿಯಂತ್ರಿಸಲು ಲಸಿಕೆ ನೀಡುವುದೊಂದೇ ಪರಿಹಾರ ವಾಗಿದ್ದು, ಪ್ರತೀ ಆರು ತಿಂಗಳಿಗೊಮ್ಮೆ ಲಸಿಕೆ ಹಾಕಿಸುವ ಮೂಲಕ ರೈತರು ತಮ್ಮ ಜಾನುವಾರುಗಳನ್ನು ಈ ರೋಗದಿಂದ ರಕ್ಷಿಸಿಕೊಳ್ಳಬೇಕು ಎಂದರು.

ಕಾಲುಬಾಯಿ ಜ್ವರ ಲಸಿಕಾ ಕಾರ್ಯಕ್ರಮದಲ್ಲಿ ಎಲ್ಲಾ ಜಾನುವಾರುಗಳಿಗೆ ಲಸಿಕೆ ಹಾಕುವುದರೊಂದಿಗೆ ಯಾವುದೇ ಜಾನುವಾರು ಲಸಿಕೆ ಪಡೆಯುವು ದರಿಂದ ಬಿಟ್ಟುಹೋಗದಂತೆ ನೋಡಿಕೊಳ್ಳಬೇಕು. ಜಿಲ್ಲೆಗೆ ಅಗತ್ಯವಿರುವ ಲಸಿಕೆ ಹಾಗೂ ಇನ್ನಿತರ ಸಾಮಾಗ್ರಿಗಳನ್ನು ಈಗಾಗಲೇ ದಾಸ್ತಾನು ಇಟ್ಟುಕೊಳ್ಳಲಾಗಿದೆ ಎಂದು ಅವರು ಮಾಹಿತಿ ನೀಡಿದರು.

ಪ್ರಸಕ್ತ ಸಾಲಿನಲ್ಲಿ ಜಾನುವಾರುಗಳ ಆರೋಗ್ಯ ಮತ್ತು ರೋಗ ನಿಯಂತ್ರಣ ಕಾರ್ಯಕ್ರಮದ ಅಡಿಯಲ್ಲಿ ಕಾಲುಬಾಯಿ ರೋಗದ ಲಸಿಕಾ ಕಾರ್ಯಕ್ರಮ ದೊಂದಿಗೆ ಚರ್ಮಗಂಟು ರೋಗ ಲಸಿಕೆಯನ್ನು ಸಹ ಜಾನು ವಾರುಗಳಿಗೆ ನೀಡಲಾಗುತ್ತಿದ್ದು, ಈ ಎರಡೂ ಲಸಿಕೆಗಳನ್ನು ಜಾನುವಾರುಗಳಿಗೆ ನೀಡುವ ಮೂಲಕ ಜಾನುವಾರುಗಳಿಂದ ಹೆಚ್ಚು ಹಾಲು ಉತ್ಪನ್ನಕ್ಕೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದವರು ಇಲಾಖೆಯ ಅಧಿಕಾರಿಗಳಿಗೆ ತಿಳಿಸಿದರು.

ಪಶುವೈದ್ಯರು, ಸಿಬ್ಬಂದಿ, ಕೆಎಂಎಫ್ ಸಿಬ್ಬಂದಿ ಹಾಗೂ ತರಬೇತಿ ಹೊಂದಿರುವ ಪಶುಸಖಿಯರ ಮೂಲಕ ಲಸಿಕಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತಿದ್ದು, ಇವರುಗಳು ಮನೆಮನೆಗೆ ಭೇಟಿ ನೀಡುವ ಸಂದರ್ಭ ದಲ್ಲಿ ರೈತರು ಅಗತ್ಯ ಸಹಕಾರ ನೀಡುವಂತೆ ಜಿಲ್ಲಾಧಿಕಾರಿ ಮನವಿ ಮಾಡಿದರು. ಹೆಚ್ಚಿನ ಸಂಖ್ಯೆಯ ಜಾನುವಾರುಗಳಿಗೆ ಲಸಿಕೆ ಹಾಕಿಸುವ ಮೂಲಕ ಕಾರ್ಯಕ್ರಮವನ್ನು ಯಶಸ್ಸುಗೊಳಿಸಬೇಕು ಎಂದರು.

ಕಳೆದ ಆರನೇ ಸುತ್ತಿನ ಕಾಲುಬಾಯಿ ಜ್ವರ ಲಸಿಕಾ ಕಾರ್ಯಕ್ರಮದ ವೇಳೆ ಜಿಲ್ಲೆಯಲ್ಲಿ ಶೇ.96ರಷ್ಟು ಗುರಿಸಾಧಿಸಲಾಗಿತ್ತು. ಜಿಲ್ಲೆಯ ಒಟ್ಟು 2,08,558 ಜಾನುವಾರುಗಳಿಗೆ ಲಸಿಕೆ ನೀಡುವ ಗುರಿ ನಿಗದಿಪಡಿ ಸಿದ್ದು, ಇವುಗಳಲ್ಲಿ 2,00,888 ಜಾನುವಾರುಗಳಿಗೆ ಲಸಿಕೆ ಹಾಕಲಾಗಿತ್ತು. ಇದೀಗ ಏಳನೇ ಸುತ್ತಿನ ಲ್ಲಿಯೂ ಹೆಚ್ಚಿನ ಸಂಖ್ಯೆಯ ಜಾನುವಾರುಗಳಿಗೆ ಲಸಿಕೆ ಹಾಕಿಸುವ ಮೂಲಕ ಅವುಗಳ ಆರೋಗ್ಯ ರಕ್ಷಣೆಗೆ ಮುಂದಾಗಬೇಕು ಎಂದರು.

ಜಿಲ್ಲೆಯ ಕಾಪು, ಉಡುಪಿ, ಬೈಂದೂರು, ಹೆಬ್ರಿ, ಕುಂದಾಪುರ, ಕಾರ್ಕಳ ಹಾಗೂ ಬ್ರಹ್ಮಾವರ ತಾಲೂಕು ಮತ್ತು ಉಡುಪಿ ಪಾಲಿಕ್ಲಿನಿಕ್‌ನಲ್ಲಿ ತಲಾ ಒಂದರಂತೆ ಒಟ್ಟು 8 ಪಶು ಸಂಜೀವಿನಿ ಆಂಬುಲೆನ್ಸ್ ಘಟಕಗಳು ಕಾರ್ಯನಿರ್ವಹಿಸುತ್ತಿದ್ದು, ಪ್ರತೀ ಚಿಕಿತ್ಸಾ ಘಟಕದ ವಾಹನದಲ್ಲಿ ಪಶುವೈದ್ಯರು, ಪಶುವೈದ್ಯ ಸಹಾಯಕ ಹಾಗೂ ವಾಹನ ಚಾಲಕರನ್ನು ಈಗಾಗಲೇ ನೇಮಕಗೊಳಿಸ ಲಾಗಿದೆ. 2024- 25ನೇ ಸಾಲಿನಲ್ಲಿ ಈ ವಾಹನಗಳ ಮೂಲಕ ಒಟ್ಟು 7,488 ಜಾನುವಾರು ಗಳಿಗೆ ಚಿಕಿತ್ಸೆ ನೀಡಲಾಗಿದೆ ಎಂದೂ ಅವರು ವಿವರಿಸಿದರು.

ಸಭೆಯಲ್ಲಿ ಪಶುಪಾಲನಾ ಇಲಾಖೆಯ ಉಪನಿರ್ದೇಶಕ ಡಾ.ಎಂ.ಸಿ ರೆಡ್ಡಪ್ಪ, ಮುಖ್ಯ ಪಶು ವೈದ್ಯಾಧಿಕಾರಿ ಡಾ.ಸಂದೀಪ್, ತಾಲೂಕುಗಳ ಆಡಳಿತ ಮುಖ್ಯ ಪಶುವೈದ್ಯಾಧಿಕಾರಿಗಳು ಉಪಸ್ಥಿತರಿದ್ದರು.