ಉಡುಪಿ: ಅಪಘಾತದಲ್ಲಿ ಗಾಯಗೊಂಡಿದ್ದ ಹೋಟೆಲ್ ಮ್ಯಾನೇಜರ್ ಚಿಕಿತ್ಸೆ ಫಲಿಸದೆ ಮೃತ್ಯು

ಉಡುಪಿ: ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಸಂತೆಕಟ್ಟೆ ನಿವಾಸಿ ಮಣಿಪಾಲ ಹೊಟೇಲ್‌ವೊಂದರ ಮ್ಯಾನೇಜ‌ರ್ ಪ್ರವೀಣ್ ಸಾಲ್ಯಾನ್ (44) ಅವರು ಚಿಕಿತ್ಸೆ ಫಲಕಾರಿಯಾಗದೆ ಇಂದು ನಿಧನರಾದರು.

ಪ್ರವೀಣ್ ಅವರು ನಿನ್ನೆ ಆರೂರಿನ ಪತ್ನಿ ಮನೆಗೆ ಬೈಕ್‌ನಲ್ಲಿ ಹೋಗುವಾಗ ದನವೊಂದು ಅಡ್ಡ ಬಂದ ಪರಿಣಾಮ ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟಿದ್ದರು. ಇದರಿಂದ ಗಂಭೀರ ಗಾಯಗೊಂಡ ಅವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಮಧ್ಯಾಹ್ನ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ಕುಟುಂಬ ಮೂಲಗಳು ತಿಳಿಸಿವೆ.

ಮೃತರು ಪತ್ನಿ, ತಂದೆ, ಇಬ್ಬರು ಸಹೋದರಿಯರು, ಇಬ್ಬರು ಸಹೋದರು ಸಹಿತ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.