ಉಡುಪಿ: ರಾಜ್ಯದಲ್ಲಿರುವ ಅಲೆಮಾರಿ ಜನಾಂಗದವರಿಗೆ ಕೇಂದ್ರ ಸರ್ಕಾರದ ಮಾರ್ಗಸೂಚಿಯನ್ವಯ ಹಾಗೂ ರಾಜ್ಯ ಮಾನವ ಹಕ್ಕುಗಳ ಆಯೋಗದ ಶಿಫಾರಸ್ಸಿನನ್ವಯ ರಾಜ್ಯದ ಅಲೆಮಾರಿ ಜನಾಂಗದವರಿಗೆ ಮೀಸಲಾತಿ ಸೌಲಭ್ಯ ಹಾಗೂ ಕೇಂದ್ರ ಸರ್ಕಾರದ ಅರ್ಥಿಕ ನೆರವಿನೊಂದಿಗೆ ಅಲೆಮಾರಿ ಜನಾಂಗದ ಕಲ್ಯಾಣ ಕಾರ್ಯಕ್ರಮಗಳನ್ನು ಜಾರಿಗೊಳಿಸುವಲ್ಲಿ ಅಲೆಮಾರಿ ಜನಾಂಗದವರ ಸಲಹಾ ಸಮಿತಿಯನ್ನು ರಚಿಸಿ ಪ್ರತಿ ಮೂರು ತಿಂಗಳಿಗೊಮ್ಮೆ ಸಭೆ ಸೇರಿ ಪ್ರಗತಿ ಪರಿಶೀಲನೆ ಮಾಡಿ ಸರ್ಕಾರಕ್ಕೆ ಸೂಕ್ತ ಸಲಹೆ ನೀಡಲು ಸಲಹಾ ಸಮಿತಿಯನ್ನು ಪುನರ್ ರಚಿಸಿ ಜಿಲ್ಲಾ ಮಟ್ಟದ ಮತ್ತು ತಾಲೂಕು ಅಲೆಮಾರಿ ಜನಾಂಗದ ಅಭಿವೃದ್ಧಿ ಸಂಸ್ಥೆಯ ಪ್ರತಿನಿಧಿಯನ್ನು ಆಯ್ಕೆ ಮಾಡಬೇಕಿದ್ದು, ಅದರಂತೆ ಜಿಲ್ಲೆಯ ಅಲೆಮಾರಿ/ ಅರೆಅಲೆಮಾರಿ ಜನಾಂಗದ ಆಸಕ್ತ ಅಭ್ಯರ್ಥಿಗಳು ತಮ್ಮ ಜಾತಿ ಪ್ರಮಾಣ ಪತ್ರದೊಂದಿಗೆ ಮನವಿಯನ್ನು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕೊಠಡಿ ಸಂಖ್ಯೆ 304, ಎರಡನೇ ಮಹಡಿ, ಬಿ ಬ್ಲಾಕ್, ರಜತಾದ್ರಿ, ಮಣಿಪಾಲ, ಉಡುಪಿ ಇಲ್ಲಿಗೆ ಮೇ 10 ರ ಒಳಗಾಗಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಇಲಾಖಾ ಸಹಾಯವಾಣಿ ಸಂಖ್ಯೆ: 0820-2574881, 2573881 ಅಥವಾ ಇ-ಮೇಲ್ [email protected] ಅನ್ನು ಸಂಪರ್ಕಿಸಬಹುದಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.












