ಉಡುಪಿ: ಉಡುಪಿ ದೊಡ್ಡಣಗುಡ್ಡೆಯ ಶ್ರೀಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕಾರಣಿಕ ಕ್ಷೇತ್ರದ 19ನೇ ಪ್ರತಿಷ್ಠ ವರ್ಧಂತಿ ಮಹೋತ್ಸವದ ಪ್ರಯುಕ್ತ ಪಂಚವಿ0 ಶತಿ ದ್ರವ್ಯ ಮೀಲಿತ ಅಷ್ಟೋತ್ತರ ಶತ ಬ್ರಹ್ಮ ಕುಂಭಾಭಿಷೇಕವು ಕ್ಷೇತ್ರದ ಧರ್ಮದರ್ಶಿ ಶ್ರೀಯುತ ಶ್ರೀ ಶ್ರೀ ರಮಾನಂದ ಗುರೂಜಿ. ಮಾರ್ಗದರ್ಶನದಲ್ಲಿ ನೆರವೇರಿತು.

ಕ್ಷೇತ್ರದ ನಿಯೋಜಿತ ತಂತ್ರಿಗಳಾದ ಶ್ರೀ ಸರ್ವೇಶ ತಂತ್ರಿಗಳು ಬೆಳಗ್ಗೆ 8:20ಕ್ಕೆ ಒದಗಿದ ವೃಷಭ ಲಗ್ನ ಸುಮೂರ್ತದಲ್ಲಿ ಶಿಖರ ಕಲಶಾ ಅಭಿಷೇಕ ಹಾಗೂ ಬ್ರಹ್ಮ ಕುಂಭಾಭಿಷೇಕ ನೆರವೇರಿಸಿದರು.

ಪ್ರಯುಕ್ತ ಕ್ಷೇತ್ರದಲ್ಲಿ ಮಂಗಳ ಗಣಯಾಗ, ಪಲ್ಲಪೂಜೆ ಮಹಾಪೂಜೆ ಮಹಾ ಅನ್ನಸಂತರ್ಪಣೆ ಹಾಗೂ ಕ್ಷೇತ್ರದಲ್ಲಿ ಭಕ್ತಾದಿಗಳಿಂದ ಹರಕೆಯ ರೂಪದ ತುಲಾಭಾರ ಸೇವೆಯು ನೆರವೇರಿತು.

ಸಹಸ್ರ ಸಂಖ್ಯೆಗೂ ಮಿಕ್ಕಿದ ಭಕ್ತರುಗಳು ಅನ್ನಪ್ರಸಾದವನ್ನು ಸ್ವೀಕರಿಸಿದರು ಎಂದು ಕ್ಷೇತ್ರ ಉಸ್ತುವಾರಿ ಶ್ರೀಮತಿ ಕುಸುಮ ನಾಗರಾಜ ತಿಳಿಸಿರುತ್ತಾರೆ.













