ಉಡುಪಿ:ವಿಕಲಚೇತನರಿಗೆ ಸಾಧನ ಸಲಕರಣೆ ವಿತರಣೆ : ಅರ್ಜಿ ಆಹ್ವಾನ

ಉಡುಪಿ: ಉಡುಪಿ ನಗರಸಭೆಯ 2022-23ನೇ ಸಾಲಿನ ಎಸ್.ಎಫ್.ಸಿ. ಮುಕ್ತನಿಧಿಯ ಶೇ.5 ರ ವಿಕಲಚೇತನರ ಕಲ್ಯಾಣ
ಕಾರ್ಯಕ್ರಮದ ಅನುದಾನದಡಿ ಸಾಧನ ಸಲಕರಣೆಗಳನ್ನು ಪಡೆಯಲು ದೈಹಿಕ ವಿಕಲತೆಯ ಬಗ್ಗೆ ಜಿಲ್ಲಾ ಸರ್ಜನ್‌ರವರಿಂದ ಪಡೆದ ಪ್ರಮಾಣ ಪತ್ರ, ಆದಾಯ ದೃಢಪತ್ರ, ಪ್ರಸಕ್ತ ಸಾಲಿನ ಆಸ್ತಿತೆರಿಗೆ ಪಾವತಿ ರಶೀದಿ, ಪಡಿತರ ಚೀಟಿ ಪ್ರತಿ, ಆಧಾರ್‌ಕಾರ್ಡ್ ಪ್ರತಿಯೊಂದಿಗೆ ನಿಗದಿತ ಅರ್ಜಿಯನ್ನು ಮೇ 27 ರ ಒಳಗಾಗಿ ನಗರಸಭೆ ಉಡುಪಿ ಕಚೇರಿಗೆ ಸಲ್ಲಿಸುವಂತೆ ನಗರಸಭೆ ಪೌರಾಯುಕ್ತರ ಕಚೇರಿ ಪ್ರಕಟಣೆ ತಿಳಿಸಿದೆ.