ಬೆಂಗಳೂರು: ಎಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿ ಶಿಕ್ಷಣ ಕೋರ್ಸ್‌ಗಳ ಪ್ರವೇಶಕ್ಕೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ್ದ ಸಾಮಾನ್ಯ ಪ್ರವೇಶ ಪರೀಕ್ಷೆಯ (ಸಿಇಟಿ) ಫಲಿತಾಂಶ ಇಂದು ಪ್ರಕಟವಾಗಿದೆ. ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್ ಅವರು ಫಲಿತಾಂಶ ಪ್ರಕಟಿಸಿದ್ದಾರೆ.
ಏ.16ರಂದು ಭೌತ ವಿಜ್ಞಾನ ಮತ್ತು ರಸಾಯನ ವಿಜ್ಞಾನ, ಏ.17ರಂದು ಗಣಿತ ಮತ್ತು ಜೀವ ವಿಜ್ಞಾನ ವಿಷಯಗಳ ಪರೀಕ್ಷೆಗಳನ್ನು 775 ಪರೀಕ್ಷಾ ಕೇಂದ್ರಗಳಲ್ಲಿ ನಡೆಸಲಾಗಿತ್ತು.
ದ್ವಿತೀಯ ಪಿಯು ಪರೀಕ್ಷೆ–1 ಮತ್ತು ಪರೀಕ್ಷೆ–2, ಸಿಬಿಎಸ್‌ಇ, ಐಸಿಎಸ್‌ಇ ಫಲಿತಾಂಶ ಪ್ರಕಟವಾಗಿದ್ದು, ಅಭ್ಯರ್ಥಿಗಳು ಪಡೆದ ಅಂಕಗಳ ಕೂಡುವಿಕೆ ಕಾರ್ಯವನ್ನು ಕೆಇಎ ಪೂರ್ಣಗೊಳಿಸಿದೆ.













