ಉಡುಪಿ:ವಿಕಲಚೇತನರ ರಾಷ್ಟ್ರ ಪ್ರಶಸ್ತಿ : ಅರ್ಜಿ ಆಹ್ವಾನ

ಉಡುಪಿ: ಕೇಂದ್ರ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಮಂತ್ರಾಲಯ, ನವದೆಹಲಿ ಇವರ ವತಿಯಿಂದ
ಪ್ರಸಕ್ತ ಸಾಲಿನಲ್ಲಿ ವಿಕಲಚೇತನರ ಕ್ಷೇತ್ರದಲ್ಲಿ ಸಾಧನೆಗೈದ ವ್ಯಕ್ತಿ ಮತ್ತು ಸಂಸ್ಥೆಗಳಿಂದ ವಿವಿಧ ವಿಭಾಗಗಳಲ್ಲಿ ರಾಷ್ಟ್ರ ಪ್ರಶಸ್ತಿಗಾಗಿ
ಆನ್‌ಲೈನ್ ಮೂಲಕ ಪ್ರಸ್ತಾವನೆಯನ್ನು ಆಹ್ವಾನಿಸಲಾಗಿದೆ.

ಪ್ರಶಸ್ತಿಗಾಗಿ ಅರ್ಜಿ ಸಲ್ಲಿಸಲು ಜುಲೈ 15 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್ https://www.award.gov.in ಅಥವಾ https://www.depwd.gov.in ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಸಿ ಬ್ಲಾಕ್, ತಳ ಅಂತಸ್ತು, ಜಿಲ್ಲಾಧಿಕಾರಿ ಕಛೇರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ: 0820-2574810 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.