ಉಡುಪಿ: ಪ್ರಸಕ್ತ ಸಾಲಿನಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಮತ್ತು ನಂತರದ
(ಪಿ.ಯು.ಸಿ, ಐ.ಟಿ.ಐ ಮತ್ತು ಡಿಪ್ಲೋಮಾ ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ) ಬಾಲಕ ಮತ್ತು ಬಾಲಕಿಯರ
ವಿದ್ಯಾರ್ಥಿನಿಲಯಗಳ ಪ್ರವೇಶಾತಿಗಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾತಿ/ಪ.ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಂದ ವೆಬ್ಸೈಟ್ https://shp.karnataka.gov.in/bcwd ನಲ್ಲಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಲಯ ಪ್ರವೇಶಾತಿಗೆ ಜೂನ್ 16 ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳ ಪ್ರವೇಶಾತಿಗೆ ಜೂನ್ 20 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ವೆಬ್ಸೈಟ್ https://bcwd.karnataka.gov.in/
ಅಥವಾ ಸಹಾಯವಾಣಿ ಸಂಖ್ಯೆ: 8050770004 ಮತ್ತು 8050770005 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಉಡುಪಿ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.












