ಬೆಂಗಳೂರು: ಕೋಟ್ಯಾಂತರ ಅಭಿಮಾನಿಗಳ ಬೆಂಬಲ, ಹಾರೈಕೆ, ಪ್ರಾರ್ಥನೆ ಕೊನೆಗೂ ಫಲಿಸಿದೆ. 18ನೇ ಪ್ರಯತ್ನದಲ್ಲಿ ಆರ್’ಸಿಬಿ ತಂಡ ಟ್ರೋಫಿಗೆ ಮುತ್ತಿಟ್ಟಿದೆ. ಆರ್ಸಿಬಿ’ಯ ಈ ಐತಿಹಾಸಿಕ ಗೆಲುವು ಬೆನ್ನಲ್ಲೇ, ಫ್ರಾಂಚೈಸಿ ತಮ್ಮ ನಿಷ್ಠಾವಂತ ಅಭಿಮಾನಿಗಳೊಂದಿಗೆ ಗೆಲುವಿನ ಸಂಭ್ರಮಾಚರಣೆ ಮಾಡಲು ವಿಜಯೋತ್ಸವದ ಮೆರವಣಿಗೆಯನ್ನು ಘೋಷಣೆ ಮಾಡಿದೆ.
ಇಂದು ಮಧ್ಯಾಹ್ನ 3.30ಕ್ಕೆ ಬೆಂಗಳೂರಿನಲ್ಲಿ ಆರ್ಸಿಬಿ ವಿಜಯೋತ್ಸವದ ಮೆರವಣಿಗೆ ನಡೆಯಲಿದೆ. ಈ ವಿಜಯೋತ್ಸವ ಮೆರಣವಣಿಗೆ ವಿಧಾನಸೌಧದಿಂದ ಆರಂಭವಾಗಿ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮುಕ್ತಾಯವಾಗಲಿದೆ. ಆಟಗಾರರನ್ನು ಸ್ವಾಗತಿಸಲು ಬೆಂಗಳೂರು ಸಜ್ಜಾಗಿದ್ದು, ವಿಜಯೋತ್ಸವ ಮೆರವಣಿಗೆಯಲ್ಲಿ ಸಾವಿರಾರು ಜನರು ಭಾಗಿಯಾಗುವ ನಿರೀಕ್ಷೆಗಳಿವೆ.
ಈ ಕುರಿತು ಆರ್ಸಿಬಿ ತಂಡದ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಇದು ಆರ್‌ಸಿಬಿಯ ವಿಜಯೋತ್ಸವ ಪರೇಡ್. ಇದು ನಿಮಗಾಗಿ, 12th ಮ್ಯಾನ್ ಆರ್ಮಿ ಎಂದು ಅಭಿಮಾನಿಗಳನ್ನು ಉಲ್ಲೇಖಿಸಲಾಗಿದ್ದು, ಆರ್ಸಿಬಿ ಸೋಲಿನಲ್ಲಿ ಮತ್ತು ಗೆಲುವಿನಲ್ಲೂ ಪ್ರತಿ ಭಾರಿ ಬೆಂಬಲಾವಗಿ ನಿಂತ ನಿಷ್ಠಾವಂತ ಅಭಿಮಾನಿಗಳೆ ಈ ಗೆಲುವಿನ ಕಿರೀಟ ನಿಮ್ಮದೇ ಎಂದು ಹೇಳಿದೆ.
ವಿಜಯೋತ್ಸವ ಮೆರವಣಿಗೆಯನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ಲೈವ್ ಆಗಿಯೂ ವೀಕ್ಷಿಸಬಹುದು. ಜೊತೆಗೆ, ಜಿಯೋ ಹಾಟ್‌ಸ್ಟಾರ್‌ನಲ್ಲಿ ಲೈವ್ ಸ್ಟ್ರೀಮಿಂಗ್ ಮೂಲಕವೂ ವೀಕ್ಷಿಸುವ ಅವಕಾಶವಿದೆ.












