ಆರ್‌ಸಿಬಿ ಸಂಭ್ರಮಾಚಾರಣೆ ವೇಳೆ ಹೃದಯಾಘಾತದಿಂದ ಅಭಿಮಾನಿ ಮೃತ್ಯು.

ಬೆಳಗಾವಿ, ಜೂನ್​ 04: ಐಪಿಎಲ್‌ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಇತಿಹಾಸ ಸೃಷ್ಟಿಸಿದೆ. 18 ವರ್ಷಗಳ ಬಳಿಕ ಚೊಚ್ಚಲ ಬಾರಿಗೆ ಐಪಿಎಲ್ ಕಿರೀಟ ಮುಡಿಗೇರಿಸಿಕೊಂಡಿದೆ. ಫೈನಲ್‌ನಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಬಗ್ಗು ಬಡಿದು ಆರ್‌ಸಿಬಿ ಐಪಿಎಲ್‌ ಟ್ರೋಫಿಯನ್ನು ತನ್ನದಾಗಿಸಿಕೊಂಡಿದೆ.

ಆರ್‌ಸಿಬಿ ಐಪಿಎಲ್ ಟ್ರೋಫಿ ಗೆಲ್ಲುತ್ತಿದ್ದಂತೆ ಎಲ್ಲೆಡೆ ಸಂಭ್ರಮಾಚರಣೆ ಮುಗಿಲು ಮುಟ್ಟಿತ್ತು. ಕುಣಿಯುತ್ತಿದ್ದ ವೇಳೆ ಹೃದಯಾಘಾತದಿಂದ ಕುಸಿದುಬಿದ್ದು ಓರ್ವ ಅಭಿಮಾನಿ ಮಂಜುನಾಥ್ ಕುಂಬಾರ(25)‌ ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಮೂಡಲಗಿ ತಾಲೂಕಿನ ಅವರಾದಿ ಗ್ರಾಮದಲ್ಲಿ ನಡೆದಿದೆ.