ವಿಭಾಗ ಪ್ರಭಾರಿಯಾಗಿ ಕೆ. ಉದಯಕುಮಾರ್ ಶೆಟ್ಟಿ ನೇಮಕ

ಮಂಗಳೂರು: ಬಿಜೆಪಿಯ ಮಂಗಳೂರು ವಿಭಾಗ ಪ್ರಭಾರಿಯಾಗಿ ಬಿಜೆಪಿಯ ಹಿರಿಯ ಮುಖಂಡ ಕಿದಿಯೂರು
ಉದಯಕುಮಾರ್ ಶೆಟ್ಟಿ ಅವರನ್ನು  ಮತ್ತೊಮ್ಮೆ ನೇಮಕ ಮಾಡಲಾಗಿದೆ. ಬಿಜೆಪಿಯ ನೂತನ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ನೇಮಕ ಮಾಡಿ ಆದೇಶಿಸಿದ್ದಾರೆ.
ಮಂಗಳೂರು ವಿಭಾಗದಲ್ಲಿ ಉಡುಪಿ, ದಕ್ಷಿಣಕನ್ನಡ ಮತ್ತು ಕೊಡಗು ಜಿಲ್ಲೆಗಳು ಒಳಗೊಂಡಿರುತ್ತವೆ. ಕಳೆದ ಬಾರಿಯೂ ಉದಯಕುಮಾರ್ ಶೆಟ್ಟಿಯವರು ಮಂಗಳೂರು ವಿಭಾಗದ ಪ್ರಭಾರಿಯಾಗಿ ಜವಾಬ್ದಾರಿ ನಿರ್ವಹಿಸಿದ್ದರು. ಆ ಅವಧಿಯಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಮಂಗಳೂರು ವಿಭಾಗದ ೧೫ಕ್ಷೇತ್ರಗಳಲ್ಲಿ ೧೪ಸ್ಥಾನಗಳನ್ನು ಪಡೆಯಲು ಸಾಧ್ಯವಾಗಿತ್ತು. ಅಷ್ಷೇ ಅಲ್ಲದೇ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಮತ್ತು ಲೋಕಸಭಾ ಚುನಾವಣೆಯಲ್ಲೂ ಪಕ್ಷ ಭರ್ಜರಿ ಗೆಲುವು ಸಾಧಿಸಿತ್ತು. ಅವರ ಈ ಸಾಧನೆಯನ್ನು ಪರಿಗಣಿಸಿ, ಪಕ್ಷವು ಉದಯಕುಮಾರ್ ಶೆಟ್ಟಿಯವರನ್ನು 2ನೇ ಬಾರಿಗೆ ಮಂಗಳೂರು ವಿಭಾಗದ ಪ್ರಭಾರಿಯಾಗಿ ನೇಮಿಸಿದೆ.
ಕಿದಿಯೂರು ಉದಯಕುಮಾರ್ ಶೆಟ್ಟಿ ಫ್ಯಾಮಿಲಿ ಟ್ರಸ್ಟ್ ಮೂಲಕ ಮೋದಿ ಅವರ ಮಹಾತ್ವಾಕಾಂಕ್ಷಿ ಯೋಜನೆಗಳಾದ ವಿಮಾ ಯೋಜನೆಗಳನ್ನು ಸಹಸ್ರಾರು ಕುಟುಂಬಗಳಿಗೆ ಮಿಕ್ಕಿ ಜನರಿಗೆ ಉಚಿತವಾಗಿ ನೀಡುತ್ತಾ ಬಂದಿದ್ದಾರೆ. ಕೇಂದ್ರ ಸರಕಾರದ ಹಾಗೂ ರಾಜ್ಯ ಸರಕಾರದ ಜನಪರ ಯೋಜನೆಗಳನ್ನು ಟ್ರಸ್ಟ್ ಮೂಲಕ ಜನರಿಗೆ ಮಾಹಿತಿ ಕಾರ್ಯಗಾರ ನಡೆಸುತ್ತಾ ಬಂದಿದ್ದು, ಸಾಮಾಜಿಕ ಹಾಗೂ ಧಾರ್ಮಿಕ ಕ್ಷೇತ್ರಗಳಲ್ಲಿ ಮುಂಚೂಣಿಯಾಗಿ ನಿಂತು ಸಮಾಜಮುಖಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.