ಉಡುಪಿ: ಉಡುಪಿ ನಗರಸಭೆಯ ವತಿಯಿಂದ 2023-24 ನೇ ಸಾಲಿನ ಎಸ್.ಎಫ್.ಸಿ ಮುಕ್ತನಿಧಿಯ ಶೇ. 7.25 ರ
ಇತರೆ ಹಿಂದುಳಿದ ವರ್ಗಗಳ ಕಲ್ಯಾಣ ಕಾರ್ಯಕ್ರಮದಡಿ ವಿದ್ಯಾರ್ಥಿವೇತನ ಸೌಲಭ್ಯ ಪಡೆಯಲು ಅರ್ಹ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಜೂನ್ 9 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಪೌರಾಯುಕ್ತರು, ನಗರಸಭೆ, ಉಡುಪಿ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.












