ಉಡುಪಿ:ವಿಕಲಚೇತನರ ಕಲ್ಯಾಣ ಕಾರ್ಯಕ್ರಮ : ಅರ್ಜಿ ಆಹ್ವಾನ

ಉಡುಪಿ: ನಗರಸಭಾ ನಿಧಿಯ ಶೇ. 5 ರ ವಿಕಲಚೇತನರ ಕಲ್ಯಾಣ ಕಾರ್ಯಕ್ರಮ ಯೋಜನೆಯಡಿ ರಾಜ್ಯ ಹಾಗೂ
ರಾಷ್ಟ್ರೀಯ ಮಟ್ಟದ ಕ್ರೀಡೆ, ಕಲೆ, ಸಾಂಸ್ಕೃತಿಕ ಹಾಗೂ ಇತರೆ ವ್ಯಾಸಂಗೇತರ ಚಟುವಟಿಕೆಗಳಲ್ಲಿ ಭಾಗವಹಿಸುವ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ, ವಸತಿ, ಶಿಕ್ಷಣ, ಸರ್ಕಾರಿ ಕಛೇರಿಗಳು, ಸಮುದಾಯ ಭವನ ಕಟ್ಟಡಗಳಿಗೆ ಜಾರುಹಾದಿ ಹಾಗೂ ವಿಕಲಚೇತನ ಸ್ನೇಹಿ ಶೌಚಾಲಯಗಳನ್ನು ನಿರ್ಮಿಸಲು ಇಚ್ಚಿಸುವ ಆಸಕ್ತರು/ಸಂಸ್ಥೆಗಳು ನಿಗದಿತ ಅರ್ಜಿಯೊಂದಿಗೆ ಜಾತಿ ಪ್ರಮಾಣ ಪತ್ರ, ಆದಾಯ ಪ್ರಮಾಣಪತ್ರ, ಪ್ರಸಕ್ತ ಸಾಲಿನ ತೆರಿಗೆ ಪಾವತಿ ಚಲನ್ ಪ್ರತಿ, ಆಧಾರ್ ಕಾರ್ಡ್ ಪ್ರತಿ, ಪಡಿತರ ಚೀಟಿ ಪ್ರತಿ, ಅಂಗವಿಕಲತೆಯ ಬಗ್ಗೆ ಜಿಲ್ಲಾ ಸರ್ಜನ್‌ರಿಂದ ಪಡೆದುಕೊಂಡ ಪ್ರಮಾಣ ಪತ್ರ ಮತ್ತು ಕ್ರೀಡೆ, ಕಲೆ, ಸಾಂಸ್ಕೃತಿಕ ಹಾಗೂ ಇತರೆ ವ್ಯಾಸಂಗೇತರ ಚಟುವಟಿಕೆಗಳ ಪ್ರಮಾಣ
ಪತ್ರ ಇತ್ಯಾದಿ ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸಲು ಜೂನ್ 12 ಕೊನೆಯ ದಿನ.ಹೆಚ್ಚಿನ ಮಾಹಿತಿಗಾಗಿ ಪೌರಾಯುಕ್ತರು, ನಗರಸಭೆ ಉಡುಪಿ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.