ಉಡುಪಿ: ಉಡುಪಿ ನಗರಸಭೆಯ 2023-24 ನೇ ಸಾಲಿನ ಎಸ್.ಎಫ್.ಸಿ ಮುಕ್ತನಿಧಿಯ ಶೇ. 7.25 ರ ಇತರೆ
ಹಿಂದುಳಿದ ವರ್ಗಗಳ ಕಲ್ಯಾಣ ಕಾರ್ಯಕ್ರಮದಡಿ ವಿದ್ಯಾರ್ಥಿವೇತನ ಸೌಲಭ್ಯ ಪಡೆಯಲು ಅರ್ಹ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಜೂನ್ 24 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಪೌರಾಯುಕ್ತರು, ನಗರಸಭೆ, ಉಡುಪಿ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.












