ಉಡುಪಿ:ಮುಖ್ಯಮಂತ್ರಿ ಆರೋಗ್ಯ ವಿಮಾ ಕಾರ್ಡ್ ನವೀಕರಣ

ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಆರ್ಥಿಕವಾಗಿ ಹಿಂದುಳಿದಿರುವ ಪರಿಶಿಷ್ಟ ಜಾತಿ/ ಪ.ಪಂಗಡದ
ಕುಟುಂಬದ ಸದಸ್ಯರಿಗೆ ವಿತರಿಸಲಾದ ಮುಖ್ಯಮಂತ್ರಿ ಆರೋಗ್ಯ ವಿಮಾ ಕಾರ್ಡ್ನ್ನು ಪ್ರಸಕ್ತ ಸಾಲಿನಲ್ಲಿ ನವೀಕರಿಸಲಾಗುತ್ತಿದ್ದು, ಕಾರ್ಡ್ ಹೊಂದಿರುವ ಕುಟುಂಬದ ಯಾವುದಾದರೂ ಸದಸ್ಯರು ತಮ್ಮ ಕುಟುಂಬದ ಎಲ್ಲಾ ಸದಸ್ಯರ ಬಗ್ಗೆ ಮುಚ್ಚಳಿಕೆ ಪತ್ರ ಹಾಗೂ ಹಳೆ ಆರೋಗ್ಯ ಕಾರ್ಡ್ ಪ್ರತಿಯೊಂದಿಗೆ ಜುಲೈ 21 ರ ಒಳಗಾಗಿ ನಗರಸಭಾ ಕಚೇರಿಗೆ ಹಾಜರಾಗಿ ದಾಖಲೆಗಳನ್ನು ಸಲ್ಲಿಸುವಂತೆ ಹಾಗೂ ದಾಖಲೆ ಸಲ್ಲಿಸಿದವರ ಕಾರ್ಡ್ಗಳನ್ನು ಮಾತ್ರ ನವೀಕರಿಸಲಾಗುವುದು ಎಂದು ನಗರಸಭೆ ಪೌರಾಯುಕ್ತರ ಕಚೇರಿ ಪ್ರಕಟಣೆ ತಿಳಿಸಿದೆ.