ಉಡುಪಿ:ಜೂನ್ 27 ರಂದು ರಕ್ತದಾನ ಶಿಬಿರ

ಉಡುಪಿ: ಜಿಲ್ಲಾಡಳಿತ, ಜಿಲ್ಲಾಧಿಕಾರಿಯವರ ಕಚೇರಿ, ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ (ರಿ) ಉಡುಪಿ
ಜಿಲ್ಲಾ ಶಾಖೆ, ಜಿಲ್ಲಾ ಆಸ್ಪತ್ರೆ ರಕ್ತನಿಧಿ ಕೇಂದ್ರ ಉಡುಪಿ ಹಾಗೂ ರಕ್ತನಿಧಿ ಕೇಂದ್ರ ಕೆ.ಎಂ.ಸಿ ಮಣಿಪಾಲ ಇವರ ಸಹಯೋಗದೊಂದಿಗೆ ರಕ್ತದಾನ ಶಿಬಿರವು ಜೂನ್ 27 ರಂದು ಬೆಳಗ್ಗೆ 8.30 ರಿಂದ ಮಧ್ಯಾಹ್ನ 1.30 ರ ವರೆಗೆ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ವಾಜಪೇಯಿ ಸಭಾಂಗಣದಲ್ಲಿ ನಡೆಯಲಿದೆ.

ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಕಾರ್ಯಕ್ರಮ ಉದ್ಘಾಟಿಸಲಿದ್ದು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ, ಜಿಲ್ಲಾ ಸರ್ಜನ್ ಡಾ. ಅಶೋಕ್, ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ದಿನಕರ ಶೆಟ್ಟಿ ಅಂಪಾರು ಹಾಗೂ ಮತ್ತಿತರರು ಭಾಗವಹಿಸಲಿದ್ದಾರೆ.