ಸಕಲೇಶಪುರ ಬಳಿ ಭೂಕುಸಿತ; ಶಿರಾಡಿ ಘಾಟ್ ಸಂಚಾರ ಬಂದ್

ಹಾಸನ: ಸಕಲೇಶಪುರ ತಾಲ್ಲೂಕಿನ ಮಾರನಹಳ್ಳಿ ಬಳಿ ಭೂಕುಸಿತ ಸಂಭವಿಸಿದ್ದು, ಶಿರಾಡಿ ಮಾರ್ಗದಲ್ಲಿ ವಾಹನಗಳ ಸಂಚಾರ ಬಂದ್ ಮಾಡಲಾಗಿದೆ.

ಬೆಂಗಳೂರಿನಿಂದ ಮಂಗಳೂರಿಗೆ ಸಂಚರಿಸುವ ವಾಹನಗಳು ಹಾಸನದಿಂದ ಬೇಲೂರು ಮಾರ್ಗವಾಗಿ ಚಾರ್ಮಾಡಿ ಘಾಟ್ ಮಾರ್ಗದಲ್ಲಿ ಸಂಚರಿಸುವಂತೆ ಜಿಲ್ಲಾಧಿಕಾರಿ ಲತಾಕುಮಾರಿ ಆದೇಶ ಮಾಡಿದ್ದಾರೆ.

ಮಂಗಳೂರಿನಿಂದ ಬೆಂಗಳೂರಿಗೆ ಬರುವ ವಾಹನಗಳು ಸಂಪಾಜೆ ಮತ್ತು ಚಾರ್ಮಾಡಿ ಘಾಟ್ ಮಾರ್ಗದಲ್ಲಿ ಸಂಚರಿಸಲಿವೆ ಎಂದು ತಿಳಿಸಿದ್ದಾರೆ.